ನವದೆಹಲಿ: ದೇಶದ ಮೊದಲ ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿಯಾದ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವಾರ್ಪಣೆಯನ್ನು ಮಾಡಿದ್ದಾರೆ. ಫುಲೆ ಅವರು ತಮ್ಮ ಜೀವನವನ್ನು ಸಾಮಾಜಿಕ ಐಕ್ಯತೆ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅರ್ಪಿಸಿದ್ದರು ಎಂಬುದನ್ನು ಸ್ಮರಿಸಿದರು.
ಮೋದಿ ಟ್ವೀಟ್ ಮಾಡಿ, “ಜನ್ಮ ದಿನಾಚರಣೆಯ ಅಂಗವಾಗಿ ಸಾವಿತ್ರಿಬಾಯಿ ಫುಲೆ ಅವರಿಗೆ ವಂದಿಸುತ್ತೇನೆ. ಅವರು ತಮ್ಮ ಜೀವನವನ್ನು ಸಾಮಾಜಿಕ ಐಕ್ಯತೆ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅರ್ಪಿಸಿದರು. ಸಾಮಾಜಿಕ ಪ್ರಜ್ಞೆಗಾಗಿ ಅವರು ನಡೆಸಿದ ಹೋರಾಟವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ” ಎಂದಿದ್ದಾರೆ.
ಕೇಂದ್ರ ಸಚಿವರಾದ ಹರ್ಸಿಮ್ರತ್ ಕೌರ್ ಬಾದಲ್ ಮತ್ತು ಹರ್ದೀಪ್ ಸಿಂಗ್ ಪುರಿ ಕೂಡ ಫುಲೆ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಸಾವಿತ್ರಿಬಾಯಿ ಫುಲೆ ಎಲ್ಲರಿಗೂ ಉತ್ತಮವಾದ, ಹೆಚ್ಚು ಸಮಾನತೆಯಿಂದ ಕೂಡಿದ ಪ್ರಪಂಚಕ್ಕಾಗಿ ಹೋರಾಡಿದರು. ಅವರ ಜನ್ಮದಿನದಂದು, ಅವರ ಪರಂಪರೆಯನ್ನು ಜೀವಂತವಾಗಿಡಲು ನಿರ್ಧರಿಸೋಣ” ಎಂದು ಬಾದಲ್ ಟ್ವೀಟ್ ಮಾಡಿದ್ದಾರೆ
1831ರ ಜನವರಿ 3ರಂದು ಫುಲೆ ಅವರು ಜನಿಸಿದರು. ಭಾರತೀಯ ಸಾಮಾಜಿಕ ಸುಧಾರಕಿಯಾಗಿ, ಶಿಕ್ಷಣ ತಜ್ಞೆಯಾಗಿ ಮತ್ತು ಕವಿಯತ್ರಿಯಾಗಿ ಅವರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಮತ್ತು ಭಾರತೀಯ ಸ್ತ್ರೀವಾದದ ಮಾತೆ ಎಂದು ಪರಿಗಣಿಸಲ್ಪಟ್ಟವರು. ಮಹಿಳೆಯರ ಹಕ್ಕುಗಳನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
सावित्रीबाई फुले की जन्म जयंती पर उन्हें सादर नमन। उन्होंने सामाजिक एकता, शिक्षा और महिला सशक्तिकरण के लिए अपना जीवन समर्पित कर दिया। सामाजिक चेतना के लिए उनका संघर्ष देशवासियों को सदा प्रेरित करता रहेगा।
— Narendra Modi (@narendramodi) January 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.