ಚೆನ್ನೈ: ಕೆಲ ದಿನಗಳಿಂದ ಸಭೆ, ಸಮಾರಂಭಗಳಲ್ಲಿ ಕಾಣಿಸಿಕೊಳ್ಳದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ವದಂತಿಗಳು ಹಬ್ಬಿವೆ.
ಜಯ ಅವರಿಗೆ ಲಿವರ್ ಅಥವಾ ಕಿಡ್ನಿ ಟ್ರಾನ್ಸ್ಪ್ಲಾಂಟ್ ಮಾಡುವ ಅಗತ್ಯವಿದೆ ಎಂಬ ಸುದ್ದಿಗಳು ತಮಿಳುನಾಡಿನಾದ್ಯಂತ ಹರಿದಾಡುತ್ತಿದೆ. ಇದು ಅವರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಜುಲೈ 4ರಂದು ಅವರು ಶಾಸಕಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು, ಆದಾದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎಐಎಡಿಎಂಕೆ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲೂ ಅವರು ಭಾಗವಹಿಸಿರಲಿಲ್ಲ. ಸಹಜವಾಗಿಯೇ ಪ್ರತಿಪಕ್ಷಗಳು ಜಯಾ ಅನುಪಸ್ಥಿತಿಯನ್ನು ಪ್ರಶ್ನೆ ಮಾಡುತ್ತಿವೆ.
ಜಯಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದು ಅವರ ಅನುಪಸ್ಥಿತಿ ಬಗ್ಗೆ ಪ್ರಶ್ನಿಸುವ ಎಲ್ಲಾ ಅಧಿಕಾರವು ಜನರಿಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಬೇಕೆಂದು ಡಿಎಂಕೆ, ಕಾಂಗ್ರೆಸ್ ಪಕ್ಷಗಳು ಆಗ್ರಹಿಸಿವೆ.
ಅಮ್ಮ ಅನಾರೋಗ್ಯ ಪೀಡಿತರಾಗಿದ್ದಾರೆ ಎಂಬ ವದಂತಿ ಕೇಳಿ ಆತಂಕಕ್ಕೀಡಾಗಿ ಅವರ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಎಐಎಡಿಎಂಕೆ ಪಕ್ಷ ಜಯ ಎಲ್ಲಿದ್ದಾರೆ ಎಂಬುದನ್ನು ತಿಳಿಸಿದರೆ ಒಳಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.