ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮಂಗಳವಾರ ನವದೆಹಲಿಯಲ್ಲಿ 30 ಮಾಧ್ಯಮಗಳಿಗೆ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿವಸ್ ಮೀಡಿಯಾ ಸಮ್ಮಾನ್’ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ಯೋಗದ ಬಗೆಗಿನ ವಿಷಯಗಳನ್ನು ಪ್ರಸಾರ ಮಾಡುವಲ್ಲಿ ಮಾಧ್ಯಮಗಳ ಸಕಾರಾತ್ಮಕ ಪಾತ್ರ ಮತ್ತು ಜವಾಬ್ದಾರಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸಚಿವಾಲಯವು ಕಳೆದ ವರ್ಷ ಜೂನ್ನಲ್ಲಿ ಯೋಗದ ಸಂದೇಶವನ್ನು ಹರಡುವಲ್ಲಿ ಮಾಧ್ಯಮಗಳ ಕೊಡುಗೆಯನ್ನು ಗುರುತಿಸಲು ಪ್ರಶಸ್ತಿಯನ್ನು ಆರಂಭಿಸಿತ್ತು.
ಪತ್ರಿಕೆಗಳಲ್ಲಿ ಯೋಗದ ಅತ್ಯುತ್ತಮ ವರದಿ ವಿಭಾಗದಲ್ಲಿ ಹನ್ನೊಂದು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ, ಟೆಲಿವಿಷನ್ನಲ್ಲಿ ಯೋಗದ ಅತ್ಯುತ್ತಮ ಮಾಧ್ಯಮ ವರದಿ ವಿಭಾಗದಲ್ಲಿ 8 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಮತ್ತು ರೇಡಿಯೊದಲ್ಲಿ ಯೋಗದ ಅತ್ಯುತ್ತಮ ಮಾಧ್ಯಮ ವರದಿ ವಿಭಾಗದಲ್ಲಿ 11 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಪ್ರಶಸ್ತಿಯು ವಿಶೇಷ ಪದಕ, ಫಲಕ, ಟ್ರೋಫಿ ಮತ್ತು ಮೊಮೆಂಟೋ ಅನ್ನು ಒಳಗೊಂಡಿರುತ್ತದೆ.
ಯೋಗವನ್ನು ಜನಪ್ರಿಯಗೊಳಿಸುವಲ್ಲಿ ಮಾಧ್ಯಮಗಳ ಕೊಡುಗೆ ಮತ್ತು ಪಾತ್ರಗಳನ್ನು ಆರು ಸದಸ್ಯರನ್ನು ಒಳಗೊಂಡ ತೀರ್ಪುಗಾರರ ಮಂಡಳಿ ನಿರ್ಣಯಿಸಿದೆ. ಇದರ ಅಧ್ಯಕ್ಷತೆಯನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ನ್ಯಾಯಮೂರ್ತಿ ಸಿ.ಕೆ.ಪ್ರಸಾದ್ ವಹಿಸಿದ್ದರು.
2015 ರಿಂದ ಪ್ರತಿವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 27, 2014 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುವಾಗ ಪ್ರಸ್ತಾಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.