ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ನಡೆದ ಹಿಂಸಾಚಾರದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯ ಕೇಂದ್ರಗಳನ್ನಾಗಿ ಬದಲಾಯಿಸಲು ಸರ್ಕಾರಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ದಾಂಧಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆಯನ್ನು ಅವರು ನೀಡಿದ್ದಾರೆ.
ಭುವನೇಶ್ವರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪೋಖ್ರಿಯಾಲ್, ಜೆಎನ್ಯುನಂತಹ ಸ್ವಾಯತ್ತ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಇರುವವು ಮತ್ತು ಶಿಕ್ಷಣದ ಮೇಲೆ ಮಾತ್ರ ಅವುಗಳು ಗಮನಹರಿಸಬೇಕು ಎಂದಿದ್ದಾರೆ. ಅಲ್ಲದೇ, ಜೆಎನ್ಯು ಹಿಂಸಾಚಾರದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಕ್ರಮ ಜರುಗಿಸದೆ ಬಿಡುವುದಿಲ್ಲ ಎಂದಿದ್ದಾರೆ.
ಜೆಎನ್ಯು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಘನತೆ ಮತ್ತು ಕ್ಯಾಂಪಸ್ನಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿದರು. “ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯದ ಅಡ್ಡ ಆಗಲು ಅನುಮತಿಸಲಾಗುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೇನೆ. ಇಂತಹ ದಾಳಿಯಲ್ಲಿ ಭಾಗಿಯಾಗಿರುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ”ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ, ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಅಧಿಕಾರಿಗಳು ಸೋಮವಾರ ಜೆಎನ್ಯು ಆಡಳಿತದ ಅಧಿಕಾರಿಗಳನ್ನು ಭೇಟಿಯಾಗಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಅಮಿತ್ ಖರೆ ನೇತೃತ್ವದ ಸಭೆಯಲ್ಲಿ ಜೆಎನ್ಯು ಪ್ರೊ-ವಿಸಿ ಚಿಂತಾಮಣಿ ಮಹಾಪಾತ್ರ, ರಿಜಿಸ್ಟ್ರಾರ್ ಪ್ರಮೋದ್ ಕುಮಾರ್, ರೆಕ್ಟರ್ ರಾಣಾ ಪ್ರತಾಪ್ ಸಿಂಗ್ ಮತ್ತು ಪ್ರೊಕ್ಟರ್ ಧನಂಜಯ್ ಸಿಂಗ್ ಭಾಗವಹಿಸಿದ್ದರು. “ಕಾರ್ಯದರ್ಶಿ ಅವರೊಂದಿಗೆ ವಿವರವಾದ ಚರ್ಚೆಯನ್ನು ನಡೆಸಿದ್ದಾರೆ ಮತ್ತು ಜೆಎನ್ಯುನಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆಯೂ ವಿವರಿಸಲಾಗಿದೆ” ಎಂದು ಮಾನವ ಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.