ಸುರತ್ಕಲ್: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ಹಬ್ಬಿಸಿರುವ ಸುಳ್ಳಿನ ವಿರುದ್ಧ ಜಾಗೃತಿಯನ್ನು ಮೂಡಿಸಲು ಮತ್ತು ವಾಸ್ತವಾಂಶವನ್ನು ಜನರಿಗೆ ತಿಳಿಸಲು ಬಿಜೆಪಿ ಮಂಗಳೂರು ಉತ್ತರ ಮಂಡಲದ ವತಿಯಿಂದ ಸುರತ್ಕಲ್ನಲ್ಲಿ ಮಂಗಳವಾರ ನಡೆದ ಪೋಸ್ಟ್ ಕಾರ್ಡ್ ಅಭಿಯಾನ ಮತ್ತು ಸಹಿ ಸಂಗ್ರಹ ಅಭಿಯಾನದಲ್ಲಿ ಗೃಹ ಮಂತ್ರಿಗಳಾದ ಬಸವರಾಜ್ ಬೊಮ್ಮಯಿ ಅವರು ಭಾಗವಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸಮರ್ಪಕ ಮಾಹಿತಿಯನ್ನು ನೀಡಿದರು.
ಅಪಾರ ಸಂಖ್ಯೆಯ ಜನರು ಸಹಿ ಹಾಕುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲವನ್ನು ಸೂಚಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಉತ್ತರ ಮಂಡಲದ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮೊನಪ್ಪ ಭಂಡಾರಿ, ಕೀಶೊರ್ ರೈ, ರಣದೀಪ್ ಕಾಂಚನ್, ಪೂಜಾ ಪೈ, ಜನಾರ್ಧನ ಗೌಡ, ಗಣೇಶ್ ಹೊಸಬೆಟ್ಟು, ವಿಠಲ್ ಸಾಲ್ಯಾನ್, ಲೋಕೇಶ್ ಬೊಳ್ಳಾಜೆ, ಭರತ್ ರಾಜ್ ಕೃಷ್ಣಾಪುರ, ದಿನಕರ ಇಡ್ಯಾ, ಭಾಸ್ಕರ ಕೋಟ್ಯಾನ್, ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.