ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಬಲದಿಂದ ಬಲಿಷ್ಠತೆವರೆಗೆ ಬೆಳೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದೂರವಾಣಿ ಕರೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅಧ್ಯಕ್ಷ ಟ್ರಂಪ್ ಮತ್ತು ಅವರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಹೇಳಿದೆ.
“ಹೊಸ ವರ್ಷದ ಅಂಗವಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್, ಅವರ ಕುಟುಂಬ ಮತ್ತು ಅಮೆರಿಕದ ಜನರಿಗೆ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಯಶಸ್ಸನ್ನು ಪ್ರಧಾನಿ ಹಾರೈಸಿದರು” ಎಂದು ಪ್ರಕಟಣೆ ಹೇಳಿದೆ. “ವಿಶ್ವಾಸ, ಪರಸ್ಪರ ಗೌರವ ಮತ್ತು ತಿಳುವಳಿಕೆಯ ಮೇಲೆ ನಿರ್ಮಿಸಲಾಗಿರುವ ಭಾರತ-ಯುಎಸ್ ಸಂಬಂಧಗಳು ಬಲಿಷ್ಠತೆಯತ್ತ ಬೆಳೆದಿವೆ” ಎಂದು ಪ್ರಧಾನಿ ಹೇಳಿದ್ದಾರೆ.
“ಹಿಂದಿನ ವರ್ಷದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಗಾಢವಾಗಿಸುವಲ್ಲಿನ ಮಹತ್ವದ ಪ್ರಗತಿಯನ್ನು ಪ್ರಧಾನಿ ಎತ್ತಿ ತೋರಿಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಎಲ್ಲ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅಧ್ಯಕ್ಷ ಟ್ರಂಪ್ ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುವ ಭರವಸೆಯನ್ನು ನೀಡಿದರು” ಎಂದಿದೆ.
“ಅಧ್ಯಕ್ಷ ಟ್ರಂಪ್ ಭಾರತದ ಜನರಿಗೆ ಹೊಸ ವರ್ಷದಲ್ಲಿ ಸಮೃದ್ಧಿ ಮತ್ತು ಪ್ರಗತಿಯ ಶುಭ ಹಾರೈಸಿದರು. ಕಳೆದ ಕೆಲವು ವರ್ಷಗಳಿಂದ ಈ ಸಂಬಂಧದಲ್ಲಿನ ಸಾಧನೆಗಳ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು ಮತ್ತು ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಗಾಢವಾಗಿಸಲು ತಮ್ಮ ಸಿದ್ಧತೆಯನ್ನು ಪುನರುಚ್ಚರಿಸಿದರು” ಎಂದು ಅದು ಹೇಳಿದೆ.
ಭಾರತವು ಇತ್ತೀಚಿನ ದಿನಗಳಲ್ಲಿ ಅಮೆರಿಕಾದಿಂದ ಹಲವಾರು ಮಿಲಿಟರಿ ಹಾರ್ಡ್ವೇರ್ಗಳನ್ನು ಪಡೆದುಕೊಂಡಿದೆ. ಅವುಗಳೆಂದರೆ ಅಟ್ಯಾಕ್ ಹೆಲಿಕಾಪ್ಟರ್ಗಳು, ಗಸ್ತು ವಿಮಾನಗಳು, ಸಾರಿಗೆ ವಿಮಾನಗಳು ಮತ್ತು ಹೊವಿಟ್ಜರ್ಗಳು.
ವ್ಯಾಪಾರದ ದೃಷ್ಟಿಯಿಂದ ಭಾರತವು ಈಗಾಗಲೇ ವಿದೇಶಿ ನೇರ ಹೂಡಿಕೆಗೆ ನಿಯಮಗಳನ್ನು ಸಡಿಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.