ನವದೆಹಲಿ: ಫೆಬ್ರವರಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಹಣಕಾಸು ಬಜೆಟ್ ಕುರಿತು ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೇಶದ ಜನರಲ್ಲಿ ಕೇಳಿಕೊಂಡಿದ್ದಾರೆ.
ಮೈಗೌ ಟ್ವಿಟ್ ಅನ್ನು ರಿಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಜೆಟ್ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ. ಅಲ್ಲದೇ ಬಜೆಟ್ ಆಲೋಚನೆಗಳನ್ನು ಹಂಚಿಕೊಳ್ಳಲು ಜನರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.
“ಬಜೆಟ್ 130 ಕೋಟಿ ಭಾರತೀಯರ ಆಶೋತ್ತರಗಳನ್ನು ಪ್ರತಿನಿಧಿಸುತ್ತದೆ ಮತ್ತು ಭಾರತದ ಅಭಿವೃದ್ಧಿಗೆ ಹಾದಿಯನ್ನು ಸೃಷ್ಟಿಸುತ್ತದೆ. ಮೈಗೌ ಮೂಲಕ ನೀವೆಲ್ಲರೂ ಈ ವರ್ಷದ ಬಜೆಟಿಗೆ ಸಲಹೆ ಸೂಚನೆಗಳನ್ನು ನೀಡಿ ಎಂದು ನಾನು ಆಹ್ವಾನಿಸುತ್ತೇನೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
The Union Budget represents the aspirations of 130 crore Indians and lays out the path towards India’s development.
I invite you all to share your ideas and suggestions for this year’s Budget on MyGov. https://t.co/zVCL06TdLn
— Narendra Modi (@narendramodi) January 8, 2020
ಭಾರತದ ಹಣಕಾಸು ಸಚಿವಾಲಯವು ಬಜೆಟ್ನ ಸಲಹೆಗಳಿಗೆ ಮುಕ್ತವಾಗಿದೆ ಎಂದು ಮೈಗೌನಲ್ಲಿ ತಿಳಿಸಲಾಗಿದ್ದು, ಈ ವೇದಿಕೆಯಲ್ಲಿ ರೈತರು, ಶಿಕ್ಷಣ ಮತ್ತು ಇತರ ಕ್ಷೇತ್ರಗಳ ಜನರು ತಮ್ಮ ವಿಚಾರಗಳನ್ನು ಮಂಡಿಸಲು ಆಹ್ವಾನವನ್ನು ನೀಡಿದೆ.
2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಉದ್ದೇಶದಿಂದ ಮುಂದಿನ ಐದು ವರ್ಷಗಳಲ್ಲಿ 102 ಲಕ್ಷ ಕೋಟಿ ರೂ.ಗಳನ್ನು ಮೂಲಸೌಕರ್ಯಕ್ಕಾಗಿ ಹೂಡಿಕೆ ಮಾಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಕಳೆದ ವಾರ ಅನಾವರಣಗೊಳಿಸಿದ್ದರು.
ಈ ಹಿಂದೆ ಡಿಸೆಂಬರ್ 31 ರಂದು ಸೀತಾರಾಮನ್ ಅವರು, ಹೂಡಿಕೆ ಕಾರ್ಯಪಡೆಯು ಮುಂದಿನ 5 ವರ್ಷಗಳವರೆಗೆ 102 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಗುರುತಿಸಿದೆ ಎಂದು ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.