ಸುಬ್ರಹ್ಮಣ್ಯ : ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಕಾಳಜಿಯ ಮಾಹಿತಿ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಅಗತ್ಯವಾಗಿದೆ ಎಂದು ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹೇಳಿದರು.
ಅವರು ಮಂಗಳವಾರ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆ, ಸಂಚಾರಿ ನೇತ್ರ ಘಟಕ , ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ , ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ,ಗ್ರಾಮ ಪಂಚಾಯತ್ ಗುತ್ತಿಗಾರು, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಗುತ್ತಿಗಾರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುತ್ತಿಗಾರು , ಶ್ರೀಕೃಷ್ಣಾ ಭಜನಾ ಮಂದಿರ , ಸರ್ಕಾರಿ ನೌಕರರ ಸಂಘ ಸುಳ್ಯ ಹಾಗೂ ಯುವಕ ಮಂಡಲ ಸಹಯೋಗದೊಂದಿಗೆ ನಡೆದ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಉಚಿತ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ವಿವಿಧ ಆರೋಗ್ಯ ಶಿಬಿರಗಳು ನಡೆದಿದೆ.ಈ ಮೂಲಕ ಗ್ರಾಮೀಣ ಜನರ ಆರೋಗ್ಯದ ಕಾಳಜಿಗೆ ಸರ್ಕಾರಿ ಆಸ್ಪತ್ರೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಆದ್ಯತೆ ನೀಡಿದೆ.ಇಂತಹ ಶಿಬಿರಗಳು ಇನ್ನಷ್ಟು ನಡೆಯಲಿ ಎಂದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ಲಯನ್ಸ್ ಅಧ್ಯಕ್ಷ ಬಿಟ್ಟಿ ಬಿ ನೆಡುನೀಲಂ, ಜನರ ಕಣ್ಣಿನ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ.ಈ ನಿಟ್ಟಿನಲ್ಲಿ ಸಂಸ್ಥೆ ಪ್ರಮುಖ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಂದಕುಮಾರ್, ಸರ್ಕಾರವು ಇಂದು ದೇಹದ ಪ್ರತೀ ವಿಭಾಗದ ಚಿಕಿತ್ಸೆಗೆ ಪ್ರಮುಖ ಆದ್ಯತೆ ನೀಡಿದೆ.ಹೀಗಾಗಿ ಕಣ್ಣು, ಹೃದಯ, ದಂತ ಸೇರಿದಂತೆ ಎಲ್ಲಾ ವಿಭಾಗಗಳ ಚಿಕಿತ್ಸಾ ಸೌಲಭ್ಯ ಗ್ರಾಮೀಣ ಭಾಗಗಳಲ್ಲೂ ಲಭ್ಯವಿದೆ ಎಂದರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಲಯನೆಸ್ ಅಧ್ಯಕ್ಷೆ ಸರೋಜಿನಿ ಗೌಡ, ಶ್ರೀಕೃಷ್ಣಾ ಭಜನಾ ಮಂದಿರ ಅಧ್ಯಕ್ಷ ಬಿ.ಕೆ.ಶ್ರೀಧರ್, ವೈದ್ಯರುಗಳಾದ ಡಾ.ಅಮೃತಾ ಹಾಗೂ ಡಾ.ರೂಪಾ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳು ಉಪಸ್ಥಿತರಿದ್ದರು.ಶಿಬಿರದಲ್ಲಿ 110 ಮಂದಿ ಕಣ್ಣು ತಪಾಸಣೆ ನಡೆಸಿದರು.
ಗುತ್ತಿಗಾರು ಯುವಕ ಮಂಡಲ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ,ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಂದಕುಮಾರ್ ಪ್ರಸ್ತಾವನೆಗೈದರು.ಆರೋಗ್ಯ ಸಹಾಯಕಿ ಬೀನಾ ವಂದಿಸಿದರು.ಯುವಕ ಮಂಡಲದ ಕೋಶಾಧಿಕಾರಿ ಲೋಕೇಶ್ವರ ಡಿಆರ್ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.