ನವದೆಹಲಿ: ಕೇಂದ್ರ ಬಜೆಟ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಉನ್ನತ ಆರ್ಥಿಕ ತಜ್ಞರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದರು. ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರೈಲ್ವೇ ಸಚಿವ ಪಿಯೂಶ್ ಗೋಯಲ್ ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು.
ಈಗಾಗಲೇ ಮೋದಿಯವರು ಬಜೆಟ್ ಬಗ್ಗೆ ಮೈಗೌ ವೇದಿಕೆಯಲ್ಲಿ ಸಲಹೆಯನ್ನು ನೀಡುವಂತೆ ಮೋದಿ ಜನರಲ್ಲಿ ಕೇಳಿಕೊಂಡಿದ್ದಾರೆ.
“ಕೇಂದ್ರ ಬಜೆಟ್ 130 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ ಮತ್ತು ಭಾರತದ ಅಭಿವೃದ್ಧಿಯ ಹಾದಿಯನ್ನು ರೂಪಿಸುತ್ತದೆ. ಈ ವರ್ಷದ ಮೈಗೌ ವೇದಿಕೆಯಲ್ಲಿ ಬಜೆಟಿಗಾಗಿ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ನಾನು ನಿಮ್ಮೆಲ್ಲರನ್ನೂ ಆಹ್ವಾನಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಎರಡನೇ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ.
ಅಧಿವೇಶನದ ಮೊದಲ ಹಂತ ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಎರಡನೇ ಹಂತ ಮಾರ್ಚ್ 2 ರಿಂದ ಏಪ್ರಿಲ್ 3 ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.