ಪಣಜಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಅದರದ್ದೇ ಪಕ್ಷದ ಶಾಸಕ ಗುಡುಗಿದ್ದಾರೆ. ಸಂಸತ್ತಿನಲ್ಲಿ ಅನುಮೋದನೆಗೊಂಡ ಕಾಯ್ದೆಗೆ ಬೀದಿಯಲ್ಲಿ ನಿಂತು ಸವಾಲು ಎಸೆಯಬಾರದು ಎಂದಿದ್ದಾರೆ.
ಗೋವಾ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಜಾನ್ ಫೆರ್ನಾಂಡಿಸ್ ಅವರು ತಮ್ಮ ಪಕ್ಷದ ಧೋರಣೆಯನ್ನು ಖಂಡಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಅತ್ಯುತ್ತಮ ಕಾಯ್ದೆಯಾಗಿದೆ. ಅದನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು ಎಂದಿದ್ದಾರೆ.
ಪಣಜಿಯಲ್ಲಿ ಆಯೋಜನೆಗೊಳಿಸಲಾದ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂವಿಧಾನದ 370ನೇ ವಿಧಿಯ ರದ್ದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳವನ್ನು ಅನುಭವಿಸಿ ಭಾರತಕ್ಕೆ 2014ರ ಡಿಸೆಂಬರ್ 31ರೊಳಗೆ ಬಂದವರಿಗೆ ಭಾರತದ ಪೌರತ್ವವನ್ನು ನೀಡುವುದು ಸಿಎಎ ಉದ್ದೇಶವಾಗಿದೆ. ಆದರೆ ಪ್ರತಿಪಕ್ಷಗಳು ಇದರ ವಿರುದ್ಧ ಪ್ರತಿಭಟನೆ ನಡೆಸಿ ಇಡೀ ದೇಶದಲ್ಲಿ ಬೆಂಕಿ ಹೊತ್ತಿಕೊಳ್ಳುವಂತೆ ಮಾಡಿತ್ತು. ಕಾಂಗ್ರೆಸ್ ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು.
ಇದೀಗ ಕಾಂಗ್ರೆಸ್ ಪಕ್ಷದವರೇ ತನ್ನ ಪಕ್ಷದ ಧೋರಣೆಯ ಬಗ್ಗೆ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.