ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಹಿಜ್ಬುಲ್ ಕಮಾಂಡರ್ ಸೇರಿದಂತೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಸಬ್ಜರ್ ಅಹ್ಮದ್ ಭಟ್ ಹತ್ಯೆಯಾದ ಬಳಿಕ 2017ರಲ್ಲಿ ಹಮ್ಮದ್ ಖಾನ್ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿ ಅಧಿಕಾರಕ್ಕೇರಿದ್ದ ಎಂದು ಮೂಲಗಳು ತಿಳಿಸಿವೆ. 27 ವರ್ಷದ ಭಟ್ನನ್ನು 2017 ರ ಮೇ ತಿಂಗಳಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿ ಹತ್ಯೆ ಮಾಡಿದ್ದವು. ಈತನ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಇಂದು ಬೆಳಗ್ಗೆ ಭದ್ರತಾಪಡೆಗಳು ಟ್ರಾಲ್ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿರುವ ಖಚಿತ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದವು. ಈ ಸಂದರ್ಭದಲ್ಲಿ ಉಗ್ರರು ಕಟ್ಟಡವೊಂದರಲ್ಲಿ ಅಡಗಿದ್ದರು ಎನ್ನಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಎರಡೂ ಕಡೆಗಳಿಂದಲೂ ಗುಂಡಿನ ಚಕಮಕಿ ನಡೆದಿದ್ದು ಅಂತಿಮವಾಗಿ ಮೂರು ಮಂದಿ ಉಗ್ರರು ನೆಲಕ್ಕುರುಳಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಮೂವರು ಉಗ್ರರ ಬಂಧನವಾದ ಮರುದಿನವೇ ಈ ಬೆಳವಣಿಗೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.