ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಬುಧವಾರ ಇಫ್ತಾರ್ ಕೂಟ ಆಯೋಜನೆ ಮಾಡುತ್ತಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಗೈರಾಗಲಿದ್ದಾರೆ.
ಇಂದು ಸಂಜೆ ದೆಹಲಿಯಲ್ಲಿ ಪ್ರಧಾನಿ 8 ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ. ಇಫ್ತಾರ್ ಸಮಯ ಮತ್ತು ಸಭೆಯ ಸಮಯ ಒಂದೇ ಆಗಿರುವುದರಿಂದ ಪ್ರಧಾನಿ ಇಫ್ತಾರ್ನಲ್ಲಿ ಪಾಲ್ಗೊಳ್ಳುತ್ತಿಲ್ಲ.
ಈಶಾನ್ಯ ಭಾಗದ ಅಭಿವೃದ್ಧಿಯ ಬಗೆಗಿನ ಮಹತ್ವದ ನಿರ್ಧಾರಗಳನ್ನು ಈ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆಗಳು ಇವೆ.
ಈ ಇಫ್ತಾರ್ ಕೂಟದಲ್ಲಿ ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಮತ್ತು ವಿವಿಧ ದೇಶಗಳ ರಾಯಭಾರಿಗಳು ಭಾಗಿಗಳಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.