ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಇದೇ ಜು 16 ರಿಂದ (ಗುರುವಾರ) ಎರಡು ತಿಂಗಳ ಕಾಲ ಪ್ರತಿ ದಿನ ಪುರಾಣ ವಾಚನ – ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕುಮಾರ ವಾಲ್ಮೀಕಿಯ ತೊರವೆ ರಾಮಾಯಣ ಮಹಾ ಕಾವ್ಯದ ವಾಚನ – ಪ್ರವಚನ ಪ್ರತಿದಿನ ಸಂಜೆ 6-30 ರಿಂದ 8-00 ರ ವರೆಗೆ ನಡೆಯಲಿದ್ದು ಸ್ಥಳೀಯ ವಿದ್ವಾಂಸರು ಮತ್ತು ಗಮಕಿಗಳು ಕಾರ್ಯಕ್ರಮ ನಡೆಸಿ ಕೊಡುವರು.
ಇದೇ 16 ರಂದು ಗುರುವಾರ ಸಂಜೆ 6-30 ಕ್ಕೆ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.