ಮಂಡ್ಸೋರ್: ಮಧ್ಯಪ್ರದೇಶದ ಮಂಡ್ಸೋರ್ ಜಿಲ್ಲೆಯ ಸುವಸ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರ್ದೀಪ್ ಸಿಂಗ್ ದಾಂಗ್ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಈ ಕಾಯ್ದೆಯನ್ನು ಎನ್ಆರ್ಸಿಯಿಂದ ಬೇರ್ಪಡಿಸಿ ನೋಡಬೇಕು, ಹಾಗೆ ನೋಡಿದಾಗ ಮಾತ್ರ ನಮಗೆ ಈ ಕಾಯ್ದೆಯಲ್ಲಿ ಯಾವುದೇ ಹಾನಿಯಲ್ಲ ಎಂಬುದು ಅರ್ಥವಾಗುತ್ತದೆ ಎಂದಿದ್ದಾರೆ.
“ಸಿಎಎ ಮತ್ತು ಎನ್ಆರ್ಸಿಯನ್ನು ಬೇರ್ಪಡಿಸಿ ನೋಡಿದಾಗ, ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ದೌರ್ಜನ್ಯ ಅನುಭವಿಸಿದವರು ಭಾರತದಲ್ಲಿ ಸೌಲಭ್ಯಗಳನ್ನು ಪಡೆಯುವುದರಿಂದ ಯಾವುದೇ ಹಾನಿಯಿಲ್ಲ ಎಂಬುದರ ಅರಿವಾಗುತ್ತದೆ. ಆದರೆ ಜನರು ಇವರೆಡನ್ನು ಒಟ್ಟು ಸೇರಿಸಿ ನೋಡುತ್ತಿರುವುದರಿಂದ ಸಮಸ್ಯೆ ಉದ್ಭವವಾಗಿದೆ” ಎಂದಿದ್ದಾರೆ.
ಮಾತ್ರವಲ್ಲದೇ, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ನಾನು ಮತ್ತು ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿನ್ಹಾ ಅವರು ಜಂಟಿಯಾಗಿ ಬೆಂಬಲಿಸಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಸಿಎಎ ಅನ್ನು ರದ್ದುಪಡಿಸಬೇಕು ಮತ್ತು ಎನ್ ಆರ್ ಸಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಸಭೆಯನ್ನು ನಡೆಸುತ್ತಿರುವ ಸಂದರ್ಭದಲ್ಲೇ ಕಾಂಗ್ರೆಸ್ ನಾಯಕನಿಂದ ಈ ಹೇಳಿಕೆ ಹೊರಗೆ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.