ನವದೆಹಲಿ: ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಏಕಾದಶಿ ಸಂದರ್ಭದಲ್ಲಿ ಪ್ರಕಟನೆ ಹೊರಬೀಳಬಹುದು ಎನ್ನಲಾಗಿದೆ.
“ಈ ಘೋಷಣೆ ಜನವರಿ 20 ಅಥವಾ ಜನವರಿ 21 ರಂದು ಹೊರ ಬೀಳಬಹುದು” ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಏಕಾದಶಿ ನೂತನ ಅಧ್ಯಕ್ಷರಿಗೆ ಪದಗ್ರಹಣ ಮಾಡಲು ಸೂಕ್ತ ಸಂದರ್ಭವೆಂದು ತಿಳಿದು, ಅಂದೇ ನಡ್ಡಾ ಅವರಿಗೆ ಅಧ್ಯಕ್ಷ ಸ್ಥಾನವನ್ನು ನೀಡಲು ನಿರ್ಧರಿಸಿದೆ ಎನ್ನಲಾಗಿದೆ.
2019ರ ಜೂನ್ ತಿಂಗಳಿನಿಂದ ನಡ್ಡಾ ಅವರು ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷರಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅವರು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಮಾಜಿ ಸಚಿವರಾಗಿದ್ದಾರೆ ಮತ್ತು ಹಿಮಾಚಲ ಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದಾರೆ ಮತ್ತು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಕಾರ್ಯದರ್ಶಿಯೂ ಆಗಿದ್ದಾರೆ.
ಕಳೆದ 6 ವರ್ಷಗಳಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅಮಿತ್ ಶಾ ಅವರು ಕೆಳಗಿಳಿಯುತ್ತಿದ್ದಾರೆ. ಗೃಹ ಸಚಿವರೂ ಆಗಿರುವ ಕಾರಣಕ್ಕೆ ಅವರಿಗೆ ಹೆಚ್ಚಿನ ಜವಾಬ್ದಾರಿಗಳು ಇರುವುದರಿಂದ ನಡ್ಡಾ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆ. ನಡ್ಡಾ ನೇಮಕದ ಮೂಲಕ ಬಿಜೆಪಿಯ ಹೊಸ ಅಧ್ಯಾಯ ಆರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.