ಬೆಂಗಳೂರು: ಸಿಎಎ ಕುರಿತ ಜಾಗೃತಿ ಕಾರ್ಯಕ್ರಮದ ವೇಳೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಕೊಲೆ ಮಾಡಲು ಪ್ರಯತ್ನಿಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಇರ್ಫಾನ್, ಸೈಯದ್ ಅಕ್ಬರ್, ಸೈಯದ ಸಿದ್ದಿಕ್, ಸೈಯದ್ ಪಾಷಾ ಎಂಬುವವರನ್ನು ಬಂಧಿಸಲಾಗಿದೆ. ಸಿಎಎ ಪರ ಸಮಾವೇಶದ ಬಳಿಕ ಇವರುಗಳು ಆರ್ ಎಸ್ ಎಸ್ ಮುಖಂಡರೊಬ್ಬರ ಮೇಲೆ ಹಲ್ಲೆಯನ್ನು ನಡೆಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧನಕ್ಕೊಳಪಡಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ.
ಡಿ.22 ರಂದು ಬೆಂಗಳೂರಿನ ಟೌನ್ ಹಾಲ್ನಲ್ಲಿ ಸಿಎಎ ಪರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರನ್ನು ಹತ್ಯೆ ಮಾಡಲು ಇವರುಗಳು ಸ್ಕೆಚ್ ಹಾಕಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
“ವರುಣ್ ನಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆ ನಮ್ಮ ಉದ್ದೇಶವಾಗಿತ್ತು” ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಸಿಎಎ ಪರವಾಗಿ ಮಾತನಾಡುತ್ತಿದ್ದದ್ದು ಈ ಆರೋಪಿಗಳನ್ನು ಕೆರಳಿಸಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಕೊಲೆಗೆ ಸಂಚು ರೂಪಿಸಿದ್ದನ್ನು ಪೊಲೀಸ್ ಇಲಾಖೆ ಬಹಿರಂಗಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.