ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿಯಲಿರುವ ಅವರು ಅರಮನೆ ಮೈದಾನದಲ್ಲಿ ‘ವೇದಾಂತ ಭಾರತಿ ವಿವೇಕದೀಪಿನಿ ಮಹಾಸಮರ್ಪಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅವರು ನೆಹರು ಮೈದಾನದಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗರಣ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಪಕ್ಷಗಳು ಹಬ್ಬಿಸುತ್ತಿರುವ ಸುಳ್ಳಿಗೆ ಪ್ರತಿಯಾಗಿ ಬಿಜೆಪಿ ದೇಶವ್ಯಾಪಿಯಾಗಿ ಜನಜಾಗರಣ ಅಭಿಯಾನವನ್ನು ನಡೆಸುತ್ತಿದೆ. ಕರ್ನಾಟದಲ್ಲೂ ಜನ ಜಾಗರಣ ಸಮಾವೇಶಗಳು ಆಯೋಜನೆಗೊಳ್ಳುತ್ತಿವೆ. ದೊಡ್ಡ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಆಯೋಜನೆಗೊಳ್ಳುತ್ತಿದೆ.
ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪೊಲೀಸ್ ಬಿಗಿ ಭದ್ರತೆಯನ್ನು ಹಾಕಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಿದ್ದಾರೆ. ಹುಬ್ಬಳ್ಳಿ, ಧಾರವಾಡ, ಮಹಾನಗರ ಜಿಲ್ಲೆಯಲ್ಲದೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಈಗಾಗಲೇ ಎನ್ಎಸ್’ಜಿ 2 ತಂಡಗಳು ನಗರಕ್ಕೆ ಆಗಮಿಸಿದ್ದು, ಸಮಾವೇಶದ ಸ್ಥಳ ಪರಿಶೀಲಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸರ್ಪಗಾವಲನ್ನು ಹಾಕಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.