
ನವದೆಹಲಿ: ವಿದೇಶಾಂಗ ಸಚಿವಾಲಯವು ಪಾಕಿಸ್ಥಾನದ ಹೈ ಕಮಿಷನ್ನ ಹಿರಿಯ ಅಧಿಕಾರಿಗೆ ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ ಮತ್ತು ಹಿಂದೂ ಅಲ್ಪಸಂಖ್ಯಾತ ಸಮುದಾಯದ ಮೂವರು ಅಪ್ರಾಪ್ತ ಬಾಲಕಿಯರ ಅಪಹರಣಕ್ಕೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ. ಜನವರಿ 14 ರಂದು ಪಾಕಿಸ್ಥಾನದಲ್ಲಿ ಶಾಂತಿ ಮತ್ತು ಸರ್ಮಿ ಮೇಘ್ವ ಎಂಬ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಣ ಮಾಡಲಾಗಿದೆ ಮತ್ತು ಜನವರಿ 15 ರಂದು ಇನ್ನೊಬ್ಬ ಬಾಲಕಿ ಮೆಹಾಕ್ ಎಂಬಾಕೆಯನ್ನು ಅಪಹರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ದುಷ್ಕೃತ್ಯ ಬಗ್ಗೆ ಭಾರತ ಗಂಭೀರ ಕಾಳಜಿಯನ್ನು ಪಾಕಿಸ್ಥಾನದ ಅಧಿಕಾರಿಗೆ ತಿಳಿಸಿದೆ ಮತ್ತು ಖಂಡನೆ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾಶ್ಮೀರ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧಗಳು ಅತ್ಯಂತ ಕೆಳಮಟ್ಟದಲ್ಲಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ವರದಿಗಳ ಪ್ರಕಾರ, ಹಿಂದೂ ಅಲ್ಪಸಂಖ್ಯಾತ ಸಮುದಾಯದ ಶಾಂತಿ ಮೇಘವಾಡ್ ಮತ್ತು ಸರ್ಮಿ ಮೇಘ್ವ ಎಂಬ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಜನವರಿ 14 ರಂದು ಅಪಹರಿಸಲಾಗಿದೆ. ಇವರು ಪಾಕಿಸ್ಥಾನದ ದಕ್ಷಿಣ ಸಿಂಧ್ ಪ್ರಾಂತ್ಯದ ಥಾರ್ಪಾರ್ಕರ್ ಜಿಲ್ಲೆಯ ಉಮರ್ ಗ್ರಾಮಕ್ಕೆ ಸೇರಿದವರಾಗಿದ್ದು, ಈ ಗ್ರಾಮ ಹೆಚ್ಚಿನ ಹಿಂದೂ ಜನಸಂಖ್ಯೆಯನ್ನು ಹೊಂದಿದೆ.
ಜನವರಿ 15 ರಂದು ಸಿಂಧ್ನ ಜಾಕೋಬಾದ್ ಜಿಲ್ಲೆಯಿಂದ ಮೆಹಕ್ ಎಂಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿದೆ.
ಅಲ್ಪಸಂಖ್ಯಾತ ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅವರನ್ನು ಬಲವಂತವಾಗಿ ಮತಾಂತರ ಮಾಡುವ ಘಟನೆಗಳು ಪಾಕಿಸ್ಥಾನದಲ್ಲಿ ನಡೆಯುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಇಂತಹ ಆಘಾತಕಾರಿ ಮತ್ತು ಶೋಚನೀಯ ಘಟನೆಗಳ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


