ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಟಿಕೆಟ್ ಹಂಚಿಕೆಗಾಗಿ ರಾಜಕಾರಣಿಗಳ ಲಾಬಿ ಕೂಡ ಏರುತ್ತಿದೆ. ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ತಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯ ವಿರುದ್ಧವೇ ಪ್ರತಿಭಟನೆಯನ್ನು ನಡೆಸುತ್ತಿದೆ.
ಪಟೇಲ್ ನಗರ ಮತ್ತು ಕರಾವಲ್ ನಗರ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಸೋನಿಯಾ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ, ಟಿಕೆಟ್ ಹಂಚಿಕೆಯ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಅರವಿಂದ್ ಸಿಂಗ್ ಮತ್ತು ಹರ್ಮನ್ ಸಿಂಗ್ ಅವರಿಗೆ ಟಿಕೆಟ್ ನೀಡಲಾಗುತ್ತಿಲ್ಲ ಎಂಬುದು ಇವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಪ್ರತಿಭಟನಾಕಾರರು ದೆಹಲಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಭಾಷ್ ಚೋಪ್ರಾ ಅವರ ಕಾರನ್ನು ಅಡ್ಡಗಟ್ಟಿ ಘೋಷಣೆಗಳನ್ನು ಕೂಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೋಪ್ರಾ, ಹೆಚ್ಚಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಇನ್ನಷ್ಟೇ ಮಾಡಬೇಕು ಎಂದಿದ್ದಾರೆ. ಅಲ್ಲದೇ ಪಕ್ಷವು ಆರ್ಜೆಡಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.
70 ಸದಸ್ಯರ ದೆಹಲಿ ವಿಧಾನಸಭೆಯ ಮತದಾನ ಫೆಬ್ರವರಿ 8 ರಂದು ನಡೆಯಲಿದೆ. ಮತ ಎಣಿಕೆ ಫೆಬ್ರವರಿ 11 ರಂದು ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.