ನವದೆಹಲಿ: ಕೇಂದ್ರ ಸರ್ಕಾರದ ಬೃಹತ್ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಕೇಂದ್ರ ಸಚಿವರ ನಿಯೋಗ ಶನಿವಾರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಈ ಹಿನ್ನಲೆಯಲ್ಲಿ ನಿಯೋಗಕ್ಕೆ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಶ್ಮೀರ ಕಣಿವೆಯ ಹಳ್ಳಿಗಳಲ್ಲಿಯೂ ಅಭಿವೃದ್ಧಿಯ ಸಂದೇಶವನ್ನು ಹರಡುವಂತೆ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ತಮ್ಮ ಮಂತ್ರಿ ಮಂಡಳಿಯ ನಿರ್ಣಾಯಕ ಸಭೆಯಲ್ಲಿ ಪ್ರಧಾನಿ ಈ ವಿಷಯ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ ಜನರಿಗೆ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚನೆಯನ್ನು ನೀಡಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿರುವ ನಿಯೋಗವು ನಗರ ಪ್ರದೇಶಗಳಿಗೆ ಮಾತ್ರ ತಮ್ಮನ್ನು ಸೀಮಿತಗೊಳಿಸಬಾರದು. ಹಳ್ಳಿಗಳ ಜನರನ್ನೂ ಭೇಟಿ ಮಾಡಿ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ 36 ಕೇಂದ್ರ ಸಚಿವರುಗಳ ನಿಯೋಗ ಶನಿವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮತ್ತು ರಾಜ್ಯವನ್ನು ಕೇಂದ್ರ ಪ್ರದೇಶವಾಗಿ ವಿಭಜಿಸಿದ ನಂತರ ಇದು ಸಚಿವರುಗಳ ಮೊದಲ ಭೇಟಿ ಇದಾಗಿದೆ.
ಸಂಪುಟ ಮಂತ್ರಿಗಳು ಮತ್ತು ರಾಜ್ಯ ಖಾತೆ ಸಚಿವರು (ಎಂಒಎಸ್)ಗಳನ್ನು ಒಳಗೊಂಡ ಈ ತಂಡವು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.