ನವದೆಹಲಿ: ವ್ಯಾಪಾರ ಮತ್ತು ಜನರ ಸಂಚಾರಕ್ಕೆ ಅನುಕೂಲವಾಗುವಂತೆ ಭಾರತದ ನೆರವಿನೊಂದಿಗೆ ನಿರ್ಮಿಸಲಾಗಿರುವ ಜೋಗಬಾನಿ-ಬಿರಾಟ್ ನಗರದಲ್ಲಿನ ಎರಡನೇ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ (ಐಸಿಪಿ) ಅನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಅವರು ಮಂಗಳವಾರ ಜಂಟಿಯಾಗಿ ಉದ್ಘಾಟಿಸಿದ್ದಾರೆ.
ಉಭಯ ದೇಶಗಳ ನಡುವಿನ ಜೋಗಬಾನಿ-ಬಿರಾಟ್ನಗರ ಗಡಿಯಲ್ಲಿ ಮಂಗಳವಾರ ಉಭಯ ಪ್ರಧಾನಮಂತ್ರಿಗಳು ಜಂಟಿಯಾಗಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ಉದ್ಘಾಟನೆಗೊಳಿಸಿದರು ಎಂದು ಪ್ರಧಾನಿ ಕಚೇರಿ ಸೋಮವಾರ ತಿಳಿಸಿದೆ.
ಎರಡು ದೇಶಗಳ ನಡುವಿನ ವ್ಯಾಪಾರ ಮತ್ತು ಜನರ ಸಂಚಾರಕ್ಕೆ ಅನುಕೂಲವಾಗುವಂತೆ ಭಾರತದ ನೆರವಿನೊಂದಿಗೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ ಎಂದು ಪಿಎಂಒ ಇಂಡಿಯಾ ಟ್ವೀಟ್ನಲ್ಲಿ ತಿಳಿಸಿದೆ.
ನೇಪಾಳ ಗಡಿಯಲ್ಲಿ ಇದು ಎರಡನೇ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಆಗಿದೆ. ಮೊದಲನೆಯದನ್ನು ರಾಕ್ಸೌಲ್-ಬಿರ್ಗುಂಜ್ ಗಡಿಯಲ್ಲಿ 2018 ರಲ್ಲಿ ನಿರ್ಮಿಸಲಾಯಿತು.
ಎರಡೂ ಪ್ರಧಾನ ಮಂತ್ರಿಗಳು ನೇಪಾಳದಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ಭೂಕಂಪದ ನಂತರ ಕೈಗೊಳ್ಳಲಾದ ವಸತಿ ಪುನರ್ ನಿರ್ಮಾಣ ಯೋಜನೆಗಳಲ್ಲಿನ ಗಮನಾರ್ಹ ಪ್ರಗತಿಯನ್ನೂ ವೀಕ್ಷಿಸಲಿದ್ದಾರೆ.
ಗೂರ್ಖಾ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ 50,000 ಮನೆಗಳನ್ನು ನಿರ್ಮಿಸಲು ಭಾರತ ಸರ್ಕಾರ ಬದ್ಧವಾಗಿದ್ದು, ಅದರಲ್ಲಿ 45,000 ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.