ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸರ್ಕಾರ ಮಹತ್ವಾಕಾಂಕ್ಷೆಯ ‘ಸ್ಕಿಲ್ ಇಂಡಿಯಾ’ ಯೋಜನೆಗೆ ಬುಧವಾರ ಚಾಲನೆ ನೀಡಿದ್ದಾರೆ. ಬಡತನ ವಿರುದ್ಧ ಹೋರಾಟ ನಡೆಸುವ ಧ್ಯೇಯದೊಂದಿಗೆ ಈ ಯೋಜನೆಯನ್ನು ಆರಂಭಿಸಲಾಗಿದೆ. 2022ರ ವೇಳೆಗೆ 40 ಕೋಟಿ ಜನರಿಗೆ ಉದ್ಯೋಗವಕಾಶವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಇದು ಒಳಗೊಂಡಿದೆ.
ಈ ವೇಳೆ ಮಾತನಾಡಿದ ಮೋದಿ, ’ಚೀನಾ ಜಾಗತಿಕ ಉತ್ಪಾದನೆಯ ಕಾರ್ಖಾನೆಯಾದಂತೆ, ಭಾರತಕ್ಕೆ ವಿಶ್ವದ ಮಾನ ಸಂಪನ್ಮೂಲ ರಾಜಧಾನಿಯಾಗಿ ಹೊರಹೊಮ್ಮುವ ಎಲ್ಲಾ ಸಾಮರ್ಥ್ಯವೂ ಇದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
4ರಿಂದ 5 ಕೋಟಿ ಮಾನವ ಕಾರ್ಯಪಡೆಯನ್ನು ಜಗತ್ತಿಗೆ ನೀಡುವ ಶಕ್ತಿ ಭಾರತಕ್ಕಿದೆ, ನಿಖರ ಮತ್ತು ಕ್ರಿಯಾತ್ಮಕ ಕೌಶಲ್ಯ ತರಬೇತಿಗಳ ಮೂಲಕ ಈ ಕಾರ್ಯಪಡೆಯನ್ನು ಬಲಿಷ್ಠಗೊಳಿಸುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಇದೇ ವೇಳೆ ಅವರು ‘ಕೌಶಲ ತರಬೇತಿಗೆ ಸಾಲ’ ಯೋಜನೆಗೆ ಚಾಲನೆ ನೀಡಿದರು. ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ 34 ಲಕ್ಷ ಯುವಜನರಿಗೆ ಐದು ವರ್ಷಗಳ ಅವಧಿಯಲ್ಲಿ 5,೦೦೦ ರೂಪಾಯಿಯಿಂದ 1.5 ಲಕ್ಷದವರೆಗೆ ಸಾಲ ನೀಡುವ ಯೋಜನೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.