ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಝಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಇಂದು ನವದೆಹಲಿಗೆ ಬಂದಿಳಿದಿದ್ದಾರೆ. ನಾಲ್ಕು ದಿನಗಳ ಕಾಲ ಅವರು ಭಾರತ ಪ್ರವಾಸದಲ್ಲಿರಲಿದ್ದಾರೆ.
ವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುವ ಮೂಲಕ ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವವನ್ನು ಪುನರುಜ್ಜೀವನಗೊಳಿಸುವ ಉದ್ದೇಶ, ರಕ್ಷಣಾ ಮತ್ತು ಶಕ್ತಿಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢವಾಗಿಸುವ ಉದ್ದೇಶ ಕೂಡ ಜೈರ್ ಬೋಲ್ಸನಾರೊ ಅವರ ನಾಲ್ಕು ದಿನಗಳ ಭಾರತ ಪ್ರವಾಸದ ಹಿಂದೆ ಇದೆ.
ಬೋಲ್ಸನಾರೊ ಅವರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ಭೇಟಿ ನೀಡಿದ ಮೊದಲ ಭೇಟಿ ಇದಾಗಿದೆ, ಜನವರಿ 26 ರಂದು ನಡೆಯಲಿರುವ ಭಾರತದ 71 ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮುಖ್ಯ ಅತಿಥಿಯಾಗಿ ಇವರು ಭಾಗವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ.
ಬ್ರೆಜಿಲ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಹೂಡಿಕೆ ಸಂರಕ್ಷಣೆ ಮತ್ತು ಇತರ ಕ್ಷೇತ್ರಕ್ಕೆ ಸಂಬಂಧಿಸಿದ ಬಗ್ಗೆ 15 ಒಪ್ಪಂದಗಳಿಗೆ ಸಹಿ ಹಾಕಲಾಗುತ್ತದೆ ಎಂದು ಭಾರತದಲ್ಲಿನ ಬ್ರೆಝಿಲ್ ರಾಯಭಾರಿ ಹೇಳಿದ್ದಾರೆ.
ಅಧ್ಯಕ್ಷ ಬೋಲ್ಸನಾರೊ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ.
ರಕ್ಷಣಾ, ಇಂಧನ, ವ್ಯಾಪಾರ ಮತ್ತು ಕೃಷಿ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.