ನವದೆಹಲಿ: ಭಾರತ ಚುನಾವಣಾ ಆಯೋಗ ಸ್ಥಾಪನೆಯಾದ ದಿನವನ್ನು ಸ್ಮರಿಸುವ ಸಲುವಾಗಿ 2011 ರಿಂದ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಭಾರತದಲ್ಲಿ ಆಚರಿಸಲಾಗುತ್ತದೆ. ಭಾರತ ಚುನಾವಣಾ ಆಯೋಗ ಎಂಬುದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಚುನಾವಣೆಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಇದನ್ನು 1950 ರಲ್ಲಿ ಸ್ಥಾಪನೆ ಮಾಡಲಾಯಿತು, ಇದು 18 ವರ್ಷಕ್ಕಿಂತ ಮೇಲ್ಪಟ್ಟ ಭಾರತದ ನಾಗರಿಕರಿಗೆ ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ನೀಡುತ್ತದೆ.
ರಾಷ್ಟ್ರೀಯ ಮತದಾರರ ದಿನಾಚರಣೆಯು ಪ್ರತಿವರ್ಷ ನಿರ್ದಿಷ್ಟ ವಿಷಯದ ಮೇಲೆ ಕೇಂದ್ರೀಕರಿಸುತ್ತದೆ. ಈ ವರ್ಷ, ‘ಪ್ರಬಲ ಪ್ರಜಾಪ್ರಭುತ್ವಕ್ಕೆ ಚುನಾವಣಾ ಸಾಕ್ಷರತೆ’ ಎಂಬ ಥೀಮ್ನೊಂದಿಗೆ ಇದನ್ನು ಆಚರಿಸಲಾಗುತ್ತಿದೆ.
ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದ್ದು, ಸುಮಾರು 91 ಕೋಟಿ ನಾಗರಿಕರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಪ್ರತಿ ಮತದ ಮೌಲ್ಯ ಮತ್ತು ಮಹತ್ವವನ್ನು ಎತ್ತಿ ಹಿಡಿಯಲು ಚುನಾವಣಾ ಆಯೋಗವು ಭಾರತದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಪ್ರಾರಂಭಿಸಿತು. ಹೊಸ ಮತದಾರರ ದಾಖಲಾತಿ ಮತ್ತು ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು, ಸುಗಮಗೊಳಿಸುವುದು ಮತ್ತು ಗರಿಷ್ಠಗೊಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ದೇಶದ ಎಲ್ಲ ಅರ್ಹ ಮತದಾರರನ್ನು ದಾಖಲಿಸಲು ಚುನಾವಣಾ ಆಯೋಗ ನಿರಂತರ ಪ್ರಯತ್ನಗಳನ್ನು ಮಾಡಿದೆ. ಆದರೆ, ಮತದಾರರ ನಿರಾಸಕ್ತಿ, ಮತ್ತು ದಾಖಲಾತಿ ಕೊರತೆ ಮತ್ತು ಯುವಕರಲ್ಲಿ ಭಾಗವಹಿಸುವ ಉತ್ಸಾಹವು ಕಡಿಮೆ ಇರುವುದರಿಂದ ಮತದಾನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಭವಿಷ್ಯದಲ್ಲಿ ಹೀಗಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆಯೋಗ ಶತ ಪ್ರಯತ್ನಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.