ನವದೆಹಲಿ: 71 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಶನಿವಾರ ಇಲ್ಲಿನ ಹೈದರಾಬಾದ್ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಜೈರ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದಾರೆ.
ಬ್ರೆಜಿಲ್ ಅಧ್ಯಕ್ಷರು ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ಶುಕ್ರವಾರ ಆಗಮಿಸಿದ್ದಾರೆ ಮತ್ತು ನಾಳೆ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.
ನಿನ್ನೆ, ಜೈರ್ ಬೋಲ್ಸನಾರೊ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳಿಂದ ವಿಧ್ಯುಕ್ತ ಸ್ವಾಗತವನ್ನು ಪಡೆದರು.
ಬ್ರೆಜಿಲ್ ಅಧ್ಯಕ್ಷರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನೂ ಭೇಟಿಯಾಗಿ ಮಾತುಕತೆಯನ್ನು ನಡೆಸಿದರು.
ಬೋಲ್ಸೊನಾರೊ ಅವರ ಭೇಟಿ ಕೃಷಿ, ಇಂಧನ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.
ಅವರೊಂದಿಗೆ ಹಲವಾರು ಮಂತ್ರಿಗಳು, ಹಿರಿಯ ಅಧಿಕಾರಿಗಳು, ಬ್ರೆಜಿಲ್ ಸಂಸತ್ತಿನಲ್ಲಿ ಬ್ರೆಜಿಲ್-ಇಂಡಿಯಾ ಸ್ನೇಹ ಸಮೂಹದ ಅಧ್ಯಕ್ಷರು ಮತ್ತು ಉದ್ಯಮಿಗಳು ಸೇರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.