ನವದೆಹಲಿ: ದೇಶ ಇಂದು 71 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು” ಎಂದಿದ್ದಾರೆ.
Wishing everyone a happy #RepublicDay.
सभी देशवासियों को गणतंत्र दिवस की बहुत-बहुत बधाई।
जय हिंद!
— Narendra Modi (@narendramodi) January 26, 2020
ಗಣರಾಜ್ಯೋತ್ಸವದ ಅಂಗವಾಗಿ ದೇಶವ್ಯಾಪಿಯಾಗಿ ಕಾರ್ಯಕ್ರಮಗಳು ಜರುಗುತ್ತಿವೆ. 70 ವರ್ಷಗಳ ಹಿಂದೆ ಈ ದಿನ ಭಾರತವು ತನ್ನ ಸಂವಿಧಾನವನ್ನು ಅಳವಡಿಸಿಕೊಂಡಿತು.
ಇಂಡಿಯಾ ಗೇಟ್ ಸಮೀಪದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಅಧಿಕೃತವಾಗಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆಯನ್ನು ನೀಡಲಾಗಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಜಪಥದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, 21 ಗನ್ ಸೆಲ್ಯೂಟ್ ಪಡೆದು ಗಣರಾಜ್ಯೋತ್ಸವಕ್ಕೆ ಅಧಿಕೃತ ಚಾಲನೆ ನೀಡಿದರು.
ರಾಜಪಥದಲ್ಲಿ ವರ್ಣರಂಜಿತವಾದ ಸ್ತಬ್ದಚಿತ್ರ ಪ್ರದರ್ಶನಗಳು ನಡೆದಿವೆ. ಮೂರು ಸೇನಾಪಡೆಗಳು ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಿವೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೋನರೋ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಭಾರತದ ಮಿಲಿಟರಿ ಶಕ್ತಿ, ಸಾಮಾಜಿಕ ಸಾಂಸ್ಕೃತಿಕ ವೈವಿಧ್ಯಗಳು, ಆರ್ಥಿಕ ಪ್ರಗತಿ ಮುಂತಾದವುಗಳನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಅನಾವರಣಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.