ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಮುಸ್ಲಿಂ ಮೂಲಭೂತವಾದಿ ಸಂಘಟನೆಯಾದ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ)ನಿಂದ ಭಾರೀ ಪ್ರಮಾಣದ ಹಣವನ್ನು ಸ್ವೀಕರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹಿರಿಯ ಕಾಂಗ್ರೆಸ್ ಮುಖಂಡ ಸಿಬಲ್ 77 ಲಕ್ಷ ರೂಪಾಯಿ ಪಡೆದುಕೊಂಡರೆ, ಇಂದಿರಾ ಜೈಸಿಂಗ್ 4 ಲಕ್ಷ ರೂಪಾಯಿ ಪಡೆದಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ದುಶ್ಯಂತ್ ಎ ದಾವೆ ಮತ್ತು ಅಬ್ದುಲ್ ಸಮಂದ್ ಅವರು ಕ್ರಮವಾಗಿ 11 ಲಕ್ಷ ಮತ್ತು 3.10 ಲಕ್ಷ ರೂಪಾಯಿಗಳನ್ನು ಸ್ವೀಕರಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ, ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ನಡೆದ ಹೊಸ ತನಿಖೆಯಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಗಲಭೆ ನಡೆಸಲು 120 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂಬುದು ತಿಳಿದುಬಂದಿದೆ.
ತನಿಖೆಯ ಪ್ರಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹೆಸರಿನಲ್ಲಿ 27 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. 9 ಬ್ಯಾಂಕ್ ಖಾತೆಗಳು ರೆಹಬ್ ಇಂಡಿಯಾ ಫೌಂಡೇಶನ್ಗೆ ಸೇರಿವೆ, ಇದು ಪಿಎಫ್ಐಗೆ ಸಂಬಂಧಿಸಿದೆ ಮತ್ತು ಅದೇ ಸಂಸ್ಥೆ 17 ವಿವಿಧ ಜನರು ಮತ್ತು ಸಂಸ್ಥೆಯ ಹೆಸರಿನಲ್ಲಿ 37 ಬ್ಯಾಂಕ್ ಖಾತೆಗಳನ್ನು ತೆರೆದಿದೆ ಎನ್ನಲಾಗಿದೆ.
ಈ 73 ಖಾತೆಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಪಿಎಫ್ಐ ವಿರುದ್ಧ ಸಾಕಷ್ಟು ಪುರಾವೆಗಳು ದೊರೆತಿವೆ. ವರದಿ ಪ್ರಕಾರ, ತನಿಖೆಯ ಹಾದಿ ತಪ್ಪಿಸಲು ಈ 73 ಖಾತೆಗಳಲ್ಲಿ ಸುಮಾರು 120 ಕೋಟಿ ಹಣವನ್ನು ಜಮಾ ಮಾಡಲಾಗಿದೆ. ಠೇವಣಿ ಮಾಡಿದ ನಂತರ, ಅವುಗಳಲ್ಲಿ ಅತ್ಯಲ್ಪ ಮೊತ್ತವನ್ನು ಮಾತ್ರ ಬಿಟ್ಟು ಖಾತೆಗಳನ್ನು ಖಾಲಿ ಮಾಡಲಾಯಿತು.
ಸಿಎಎ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಧನಸಹಾಯ ನೀಡಲು ದೆಹಲಿಯ ಶಹೀನ್ ಬಾಗ್ ಪ್ರದೇಶದಲ್ಲಿ ಪಿಎಫ್ಐ ಮತ್ತು ಸಂಬಂಧಿತ ಸಂಸ್ಥೆಗಳ 9 ಕಚೇರಿಗಳನ್ನು ತೆರೆಯಲಾಗಿದೆ ಎಂದು ಮೂಲವು ಮತ್ತೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದೆ.
Details of transactions between PFI and Kapil Sibal, others for anti-CAA protestshttps://t.co/3xbGlDfhOh pic.twitter.com/qZksNLEI1j
— Zee News (@ZeeNews) January 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.