
ನವದೆಹಲಿ: ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುತ್ತೇವೆ ಎಂಬ ಬೆದರಿಕೆಯನ್ನು ಹಾಕಿದ್ದ ಜೆಎನ್ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ಅನ್ನು ಮಂಗಳವಾರ ಬಿಹಾರದ ಜಹನಾಬಾದಿನಲ್ಲಿ ದೆಹಲಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದರು.
ಐಐಟಿ-ಬಾಂಬೆಯಿಂದ ಕಂಪ್ಯೂಟರ್ ವಿಜ್ಞಾನದಲ್ಲಿ ಪದವೀಧರರಾಗಿರುವ ಇಮಾಮ್ ಜೆಎನ್ಯುನಲ್ಲಿನ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾನೆ. ಸೋಷಿಯಲ್ ಮೀಡಿಯಾದಲ್ಲಿ ಈತ ಮಾಡಿದ ಭಾಷಣಗಳು ವೈರಲ್ ಆದ ನಂತರ ಇವನ ಮೇಲೆ ದೇಶದ್ರೋಹದ ಪ್ರಕರಣವನ್ನು ಹೂಡಲಾಗಿದೆ. ವಿಡಿಯೋದಲ್ಲಿ ಈತ ಅಸ್ಸಾಂ ಮತ್ತು ಈಶಾನ್ಯವನ್ನು ಭಾರತದಿಂದ ಕತ್ತರಿಸುವ ಬಗ್ಗೆ ಮಾತನಾಡಿದ್ದಾನೆ.
“ಐದು ಲಕ್ಷ ಜನರು ಸಂಘಟಿತರಾಗಿ ನಿಂತರೆ ಭಾರತದಿಂದ ಈಶಾನ್ಯವನ್ನು ಕತ್ತರಿಸುವುದು ಕಷ್ಟವೇನಲ್ಲ” ಎಂದು ಇಮಾಮ್ ಸಿಎಎ ವಿರೋಧಿ ಪ್ರತಿಭಟನೆಯ ವೇಳೆ ಜನರನ್ನು ಉದ್ದೇಶಿಸಿ ಹೇಳಿದ್ದ. ಈ ವಿಡಿಯೋದ ಎಲ್ಲಾ ಕಡೆ ವೈರಲ್ ಆಗಿತ್ತು.
ಈತನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದರು ಮತ್ತು ಸಹೋದರನನ್ನು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಈತ ಕೂಡ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾನೆ.
ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತನನ್ನು ಬಂಧಿಸಲು ದೆಹಲಿ ಪೊಲೀಸರು ಐದು ತಂಡಗಳನ್ನು ರಚಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


