ನವದೆಹಲಿ: ಭಾರತದ ಅಗ್ರಗಣ್ಯ ಬ್ಯಾಡ್ಮಿಂಟನ್ ತಾರೆಯಾಗಿ ಮಿಂಚಿದ್ದ ಸೈನಾ ನೆಹ್ವಾಲ್ ಅವರು ಬಿಜೆಪಿಯನ್ನು ಸೇರ್ಪಡೆಯಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿರುವ ಸೈನಾ ಅವರು ರಾಜಕೀಯದಲ್ಲೂ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ. ಮೂಲತಃ ಹರಿಯಾಣದವರಾದ ಸೈನಾ ಅವರು ಭಾರತದ ಅತೀ ಯಶಸ್ವಿ ಅಥ್ಲೇಟ್ಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ.
2015 ರಲ್ಲಿ ವಿಶ್ವ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಭಾರತದ ಮೊದಲ ಮಹಿಳಾ ಶಟ್ಲರ್ ಎನಿಸಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಅವರು ಥಾಯ್ಲೆಂಡ್ ಮಾಸ್ಟರ್ಸ್ ಆಡಿದ್ದಾರೆ. ಮುಂದೆಯೂ ಹಲವಾರು ಟೂರ್ನಿಗಳನ್ನು ಅವರು ಆಡಲಿದ್ದಾರೆ.
ಈಗಾಗಲೇ ಕುಸ್ತಿಪಟು ಬಬಿತಾ ಫೋಗಟ್, ಕ್ರಿಕೆಟಿಗ ಗೌತಮ್ ಗಂಭೀರ್ ಸೇರಿದಂತೆ ಹಲವಾರು ಮಂದಿ ಬಿಜೆಪಿಯನ್ನು ಸೇರಿದ್ದಾರೆ. ಇದೀಗ ಅವರ ಸಾಲಿಗೆ ಸೈನಾ ಅವರೂ ಸೇರ್ಪಡೆಯಾಗುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.