ನವದೆಹಲಿ: ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಅವರು ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಫೆಬ್ರವರಿ 8 ರ ದೆಹಲಿ ಚುನಾವಣೆಗೆ ಮುನ್ನ ಪಕ್ಷದ ಪರವಾಗಿ ಪ್ರಚಾರ ಮಾಡುವ ಸಾಧ್ಯತೆ ಇದೆ.
“ನಾನು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇನೆ, ನಾನು ತುಂಬಾ ಕಠಿಣ ಕೆಲಸ ಮಾಡುವವಳು ಮತ್ತು ನಾನು ಕಷ್ಟಪಟ್ಟು ದುಡಿಯುವ ವ್ಯಕ್ತಿಗಳನ್ನು ಪ್ರೀತಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ತುಂಬಾ ಕೆಲಸ ಮಾಡಿದ್ದನ್ನು ನಾನು ನೋಡಿದ್ದೇನೆ, ಅವರೊಂದಿಗೆ ದೇಶಕ್ಕಾಗಿ ಏನಾದರೂ ಮಾಡಲು ನಾನೂ ಬಯಸುತ್ತಿದ್ದೇನೆ” ಎಂದು ಸೈನಾ ಬಿಜೆಪಿ ಸೇರ್ಪಡೆಗೊಂಡ ಬಳಿಕ ಹೇಳಿದ್ದಾರೆ.
“ನಾನು ನರೇಂದ್ರ ಮೋದಿ ಅವರಿಂದ ಸಾಕಷ್ಟು ಸ್ಫೂರ್ತಿ ಪಡೆದುಕೊಂಡಿದ್ದೇನೆ. ದೇಶಕ್ಕಾಗಿ ಅತ್ಯುತ್ತಮ ಕೆಲಸಗಳನ್ನು ಮಾಡುವ ಪಕ್ಷವನ್ನು ನಾನು ಸೇರಿದ್ದೇನೆ” ಎಂದಿದ್ದಾರೆ.
29 ವರ್ಷದ ಹರಿಯಾಣ ಮೂಲದ ಸೈನಾ ನೆಹ್ವಾಲ್ ಅವರು ದೆಹಲಿ ಚುನಾವಣಾ ಪ್ರಚಾರದ ಮಧ್ಯೆಯೇ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಹೆಚ್ಚಿನ ಬಲ ತಂದುಕೊಟ್ಟಿದೆ. ಅವರು ಭಾರತದ ಅತ್ಯಂತ ಜನಪ್ರಿಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತೆಯೂ ಹೌದು. ಅವರು 2020ರ ಟೋಕಿಯೊ ಒಲಿಂಪಿಕ್ಸ್ಗೆ ಪ್ರಸ್ತುತ ತಯಾರಿ ನಡೆಸುತ್ತಿದ್ದಾರೆ.
ಮಾಜಿ ವಿಶ್ವ ನಂಬರ್ 1 ಆಟಗಾರ್ತಿ ಆಗಿರುವ, ದೇಶದ ಉನ್ನತ ಕ್ರೀಡಾ ಪ್ರಶಸ್ತಿಗಳಾದ ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಕೆಗೆ 2016 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.