ನವದೆಹಲಿ: ಗರ್ಭಪಾತಕ್ಕೆ ಅನುಮತಿ ನೀಡುವ ಮೇಲಿನ ಮಿತಿಯನ್ನು 24 ವಾರಗಳವರೆಗೆ ಸರ್ಕಾರ ವಿಸ್ತರಿಸಿದೆ, ಪ್ರಸ್ತುತ 20 ವಾರಗಳು ಇವೆ. ಈ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದೆ.
ಗರ್ಭಪಾತಕ್ಕಿದ್ದ ಗರ್ಭಾವಸ್ಥೆ ಮಿತಿಯನ್ನು ಹೆಚ್ಚಳಗೊಳಿಸಿರುವುದು ಪ್ರಗತಿಪರ ಸುಧಾರಣೆಯಾಗಿದೆ, ಇದು ಮಹಿಳೆಯರಿಗೆ ತಮ್ಮ ದೇಶದ ಮೇಲೆ ಸಂತಾನೋತ್ಪತ್ತಿ ಹಕ್ಕುಗಳನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.
“ಪ್ರಗತಿಪರ ಸುಧಾರಣೆ ಮತ್ತು ಮಹಿಳೆಯರಿಗೆ ಸಂತಾನೋತ್ಪತ್ತಿ ಹಕ್ಕುಗಳನ್ನು ನೀಡುವ ಸಲುವಾಗಿ ಗರ್ಭಧಾರಣೆಯ 20 ವಾರಗಳ ವೈದ್ಯಕೀಯ ಗರ್ಭಪಾತ ಮಿತಿಯನ್ನು 24 ವಾರಗಳಿಗೆ ಹೆಚ್ಚಿಸಲಾಗಿದೆ” ಎಂದು ಜಾವ್ಡೇಕರ್ ಹೇಳಿದ್ದಾರೆ. ಇದು ಸುರಕ್ಷಿತ ಗರ್ಭಪಾತವನ್ನು ಖಚಿತಪಡಿಸುತ್ತದೆ ಮತ್ತು ಮಹಿಳೆಯರಿಗೆ ಅವರ ದೇಹದ ಮೇಲೆ ಸಂತಾನೋತ್ಪತ್ತಿ ಹಕ್ಕುಗಳನ್ನು ನೀಡುತ್ತದೆ ಎಂದಿದ್ದಾರೆ.
“ಇದು ಅತೀ ಮುಖ್ಯವಾದ ಸುಧಾರಣೆಯಾಗಿದೆ. ಯಾಕೆಂದರೆ ಕೆಲವೊಂದು ಪ್ರಕರಣಗಳಲ್ಲಿ ಮೊದಲ ಐದು ತಿಂಗಳ ಗರ್ಭಾವಸ್ಥೆಯ ಬಗ್ಗೆ ಸಂಬಂಧಪಟ್ಟ ಬಾಲಕಿಗೆ ಅರಿವು ಉಂಟಾಗುವುದಿಲ್ಲ ಮತ್ತು ನ್ಯಾಯಾಲಯಕ್ಕೆ ಹೋಗಬೇಕಾದ ಪರಿಸ್ಥಿತಿ ಬರುತ್ತದೆ” ಎಂದು ಸಚಿವರು ಹೇಳಿದ್ದಾರೆ. ಇದು ಮಹಿಳೆಯರ ಒಂದು ವರ್ಗ ಮತ್ತು ವೈದ್ಯರ ಬೇಡಿಕೆಯಾಗಿತ್ತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.