ನವದೆಹಲಿ: 2019ರ ಡಿಸೆಂಬರ್ 15 ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಜಾಮಿಯಾ ನಗರದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಕಾರಣರಾದ 70 ಜನರ ಫೋಟೋಗಳನ್ನು ದೆಹಲಿ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ.
ಅಲ್ಲದೇ, ಈ ಶಂಕಿತರ ಬಗ್ಗೆ ಯಾರಾದರೂ ಮಾಹಿತಿ ನೀಡಿದರೆ ಅವರಿಗೆ ದೆಹಲಿ ಪೊಲೀಸರ ವತಿಯಿಂದ ಬಹುಮಾನ ನೀಡಲಾಗುತ್ತದೆ ಎಂದು ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜಾಮಿಯಾ ನಗರದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಫೋಟೋದಲ್ಲಿರುವ ವ್ಯಕ್ತಿಗಳು ಸಕ್ರಿಯವಾಗಿ ಗಲಭೆಗಳಲ್ಲಿ ಭಾಗಿಯಾಗಿದ್ದರು.
ಈ ದಂಗೆಕೋರರಿಗೆ ಸಂಬಂಧಿಸಿದ ಮಾಹಿತಿಯನ್ನು 011-23013918 ಮತ್ತು 9750871252 ನಲ್ಲಿ ಒದಗಿಸುವಂತೆ ಪೊಲೀಸರು ಜನರನ್ನು ಕೋರಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 17 ರಂದು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಹತ್ತು ಜನರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ಯಾರೊಬ್ಬರೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 15 ರಂದು ನಡೆದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರು 15 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಪ್ರತಿಭಟನಾಕಾರರು ನ್ಯೂ ಫ್ರೆಂಡ್ಸ್ ಕಾಲೋನಿ ಬಳಿ ನಾಲ್ಕು ಬಸ್ಗಳಿಗೆ ಬೆಂಕಿ ಹಚ್ಚಿದ್ದು, ಕನಿಷ್ಠ ಆರು ಪೊಲೀಸರು ಮತ್ತು ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಈ ವೇಳೆ ಗಾಯಗಳಾಗಿವೆ. ಜಾಮಿಯಾ ನಗರದ ಸಾರೈ ಜುಲೆನಾ ಪ್ರದೇಶದ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.