ನವದೆಹಲಿ: ಫೆಬ್ರವರಿಯಲ್ಲಿ ಭಾರತ ಪ್ರವಾಸವನ್ನು ಕೈಗೊಳ್ಳಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಜರಾತ್ ರಾಜ್ಯಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ ಮತ್ತು ಸಬರಮತಿ ನದಿಯ ತಟಕ್ಕೂ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡುವಾಗ ಗುಜರಾತ್ನ ಮೊಟೆರಾ ಕ್ರೀಡಾಂಗಣದಲ್ಲಿ ‘ಹೌಡಿ ಮೋದಿ’ ಯಂತಹ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗುವುದು ಎಂದು ವಿಜಯ್ ರೂಪಾನಿ ಸುಳಿವು ನೀಡಿದ್ದಾರೆ.
“ಇಡೀ ಏಷ್ಯಾದಲ್ಲಿ, ಸಬರಮತಿ ನದಿಯು ಅತ್ಯಂತ ಸ್ವಚ್ಛವಾದ ನದಿ ಎಂದು ಪರಿಗಣಿಸಲ್ಪಟ್ಟಿದೆ. ಈ ಕಾರ್ಯವನ್ನು ಸಾಧಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರು. ಜಪಾನ್ ಮತ್ತು ಇಸ್ರೇಲ್ ಪ್ರಧಾನಮಂತ್ರಿಗಳಂತಹ ಪ್ರಮುಖ ನಾಯಕರು ಸಹ ನದಿಯ ತಟಕ್ಕೆ ಭೇಟಿ ನೀಡಿ ಅದನ್ನು ನೋಡಿ ಆಶ್ಚರ್ಯಪಟ್ಟಿದ್ದಾರೆ” ಎಂದು ರೂಪಾನಿ ಹೇಳಿದ್ದಾರೆ.
“ಯುಎಸ್ ಅಧ್ಯಕ್ಷ ಟ್ರಂಪ್ ಕೂಡ ಫೆಬ್ರವರಿಯಲ್ಲಿ ಭಾರತಕ್ಕೆ ಬರುತ್ತಿದ್ದಾರೆ. ಈ ವೇಳೆ ಗುಜರಾತಿಗೆ ಆಗಮಿಸಲಿದ್ದಾರೆ ಮತ್ತು ಸಬರಮತಿ ನದಿಯ ತಟಕ್ಕೂ ಭೇಟಿ ನೀಡುತ್ತಾರೆ” ಎಂದು ರೂಪಾನಿ ಹೇಳಿದರು, ಆದರೆ ದಿನಾಂಕಗಳನ್ನು ಅವರು ಹೇಳಿಲ್ಲ.
ಈ ತಿಂಗಳ ಆರಂಭದಲ್ಲಿ, ಟ್ರಂಪ್ ಅವರ ಭಾರತ ಭೇಟಿಯ ದಿನಾಂಕಗಳನ್ನು ಅಂತಿಮಗೊಳಿಸಲು ಭಾರತೀಯ ಮತ್ತು ಯುಎಸ್ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಟ್ರಂಪ್ ಅವರ ಎರಡು ದಿನಗಳ ಭೇಟಿ ಫೆಬ್ರವರಿ 24-26ರಂದು ನಡೆಯಬಹುದು ಎಂಬ ನಿರೀಕ್ಷೆ ಇದೆ.
ಕಳೆದ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಭಾರತ ಟ್ರಂಪ್ ಅವರನ್ನು ಆಹ್ವಾನಿಸಿತ್ತು, ಆದರೆ ವೇಳಾಪಟ್ಟಿ ಸಮಸ್ಯೆಗಳಿಂದಾಗಿ ಅವರು ಬರಲು ಸಾಧ್ಯವಾಗಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.