ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸುಮಾರು 3 ಲಕ್ಷ ಅಕ್ರಮ ಬಾಂಗ್ಲಾದೇಶಿ ವಲಸಿಗರಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದ್ದಾರೆ. ಅಲ್ಲದೇ, ದಿನೇ ದಿನೇ ಇವರುಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
“ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಒಂದು ದಿನದ ಶೃಂಗ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಸುಮಾರು 3 ಲಕ್ಷ ಅಕ್ರಮ ಬಾಂಗ್ಲಾದೇಶಿ ವಲಸಿಗರಿದ್ದಾರೆ. ಇವರುಗಳು ದಿನಕ್ಕೆ ರೂ. 150 ಕ್ಕೂ ದುಡಿಯಲು ಸಿದ್ಧವಿದ್ದಾರೆ. ಇದೇ ಕಾರಣದಿಂದಾಗಿ ಅವರನ್ನು ಕಟ್ಟಡ ನಿರ್ಮಾಣ ಮಾಡುವವರು ಹೆಚ್ಚಾಗಿ ನೇಮಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದಾಗಿ ವಲಸೆ ಹೆಚ್ಚುತ್ತಿದೆ, ಇದು ಮಾನವ ಕಳ್ಳಸಾಗಾಣೆಗೂ ದಾರಿ ಮಾಡಿಕೊಡುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಗ್ಗೆ ಅನೇಕ ಬಾರಿ ವಿಷಯಗಳು ಚರ್ಚಿತವಾಗುತ್ತಿವೆ. ಅಪರಾಧಗಳಂತಹ ಕೃತ್ಯಗಳಲ್ಲೂ ಇವರುಗಳು ಭಾಗಿಯಾಗುತ್ತಿರುವುದು ಇನ್ನಷ್ಟು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇವರನ್ನು ಓಡಿಸಬೇಕು ಎಂಬ ಕೂಗು ದಿನೇ ದಿನೇ ಹೆಚ್ಚುತ್ತಿದೆ.
ಕೆಲವು ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಅನ್ನು ವಿಸ್ತರಿಸಲು ಅಕ್ರಮ ವಲಸಿಗರಿಗೆ ವೋಟರ್ ಐಡಿ ಮುಂತಾದ ದಾಖಲೆಗಳನ್ನು ಕೂಡ ಸೃಷ್ಟಿಸಿ ಕೊಡುತ್ತಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳುವ ಅಗತ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.