ಭೋಪಾಲ್: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ಉಮಾ ಭಾರತಿ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿಷಯದಲ್ಲಿ ಜನರನ್ನು ದಾರಿತಪ್ಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, 1947ರಲ್ಲಿ ನಡೆದ ಭಾರತ ವಿಭಜನೆಯ ಪರಿಸ್ಥಿತಿಯನ್ನು ಕಾಂಗ್ರೆಸ್ ಈಗ ದೇಶದಲ್ಲಿ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಭೋಪಾಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತವು ಬ್ರಿಟಿಷ್ ಆಡಳಿತದಿಂದ ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಸಂಭವಿಸಿದ 1947ರ ಪಿತೂರಿಯನ್ನು ಪುನಃ ಪರಿಚಯಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಆದರೆ ಇದನ್ನು ಮಾಡಲು ಬಿಜೆಪಿ ಎಂದಿಗೂ ಬಿಡುವುದಿಲ್ಲ ಎಂದು ಅವರು ಗುಡುಗಿದರು.
ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವ ಜನರಿಗೆ ಈ ಕಾಯ್ದೆಯ ಬಗ್ಗೆ ಏನೂ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಗೆಗಿನ ಎಲ್ಲಾ ಪುರಾವೆಗಳು ಮಾಧ್ಯಮಗಳ ಬಳಿ ಇವೆ ಎಂದಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಕಾನೂನನ್ನು ತರುವಲ್ಲಿ ದೃಢ ನಿಶ್ಚಯವನ್ನು ಹೊಂದಿರುವುದಕ್ಕೆ ಅವರು ಶ್ಲಾಘನೆಯನ್ನು ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.