ತಿರುವನಂತಪುರಂ: ಚೀನಾವನ್ನು ಕಾಡಿರುವ ಕರೋನವೈರಸ್ ಈಗ ಭಾರತಕ್ಕೂ ಕಾಲಿಟ್ಟಿದೆ. ಮೊದಲ ಕರೋನವೈರಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.
ಚೀನಾದ ವುಹಾನ್ ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯು ಇತ್ತೀಚಿಗೆ ಅಲ್ಲಿ ಕರೋನ ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಭಾರತಕ್ಕೆ ಆಗಮಿಸಿದ್ದರು. ಇದೀಗ ಅವರಿಗೆ ಕರೋನವೈರಸ್ ಇರುವುದು ಪತ್ತೆಯಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ.
ಸದ್ಯಕ್ಕೆ ರೋಗಿಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರುಗಳು ಹೇಳಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಕೇರಳದಲ್ಲಿ ಪ್ರಕರಣ ಪತ್ತೆಯಾಗಿರುವುದರಿಂದ ಕರ್ನಾಟಕದ ಗಡಿ ಭಾಗಗಳಲ್ಲಿ ತೀವ್ರ ಎಚ್ಚರಿಕೆಯನ್ನು ವಹಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕರೋನ ವೈರಸ್ ಚೀನಾದಲ್ಲಿ 170 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಸುಮಾರು 1700 ಮಂದಿಗೆ ಈ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಸದ್ಯ ಅಲ್ಲಿನ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.