ಜಮ್ಮು: ಜಮ್ಮು ಬಳಿ ಶುಕ್ರವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಒರ್ವ ಪೊಲೀಸ್ ಗಾಯಗೊಂಡಿದ್ದಾರೆ.
ಮುಂಜಾನೆ 5.45 ರ ಸುಮಾರಿಗೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿನ ನಾಗ್ರೋಟಾ ಟೋಲ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸ್ ತಂಡ ಶ್ರೀನಗರಕ್ಕೆ ತೆರಳುತ್ತಿದ್ದ ಟ್ರಕ್ ಅನ್ನು ತಡೆ ಹಿಡಿದಿದೆ. ಈ ವೇಳೆ ಲಾರಿಯೊಳಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಪ್ರತೀಕಾರವಾಗಿ ಪೊಲೀಸರು ಮರು ಗುಂಡು ಹಾರಿಸಿದ್ದು, ಮೂವರು ಉಗ್ರರನ್ನು ಕೊಂದು ಹಾಕಿದ್ದಾರೆ. ಇತರರು ಅರಣ್ಯ ಪ್ರದೇಶದ ಕಡೆಗೆ ಓಡಿಹೋಗಿದ್ದಾರೆ.
ಭಯೋತ್ಪಾದಕರು ಹೊಸ ಗುಂಪಿನ ಭಾಗವಾಗಿದ್ದು, ಶ್ರೀನಗರಕ್ಕೆ ತೆರಳಲು ಯೋಜಿಸಿದ್ದರು ಎಂದು ಜಮ್ಮು-ಕಾಶ್ಮೀರ ಪೊಲೀಸ್ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. “ಈ ಭಯೋತ್ಪಾದಕರು ಒಳನುಸುಳುಕೋರರ ಹೊಸ ಗುಂಪಿನವರು ಮತ್ತು ಇವರು ಶ್ರೀನಗರಕ್ಕೆ ತೆರಳಲು ಬಯಸುತ್ತಿದ್ದರು. ಅವರು ಹಿರಾನಗರ ಗಡಿಯ ಕಥುವಾದಿಂದ ನುಸುಳಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.
ಓಡಿ ಹೋದ ಉಗ್ರರನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ.
ಈ ನಡುವೆ, ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ ಪರಿಣಾಮವಾಗಿ ಉಧಂಪುರ ವಲಯದ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.