ನವದೆಹಲಿ: 2020-21ರ ಹಣಕಾಸು ವರ್ಷದ ಬಜೆಟ್ ಮಂಡಿಸಿದ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಲೋಕಸಭೆಗೆ ಮಾಹಿತಿ ನೀಡಿದ ಅವರು, ದೇಶಾದ್ಯಂತ 6.11 ಕೋಟಿ ರೈತರು ಪಿಎಂ ಫಸಲ್ ಬೀಮಾ ಯೋಜನೆಯಡಿ ವಿಮಾ ಸೌಲಭ್ಯಗಳನ್ನು ಪಡೆದಿದ್ದಾರೆ ಎಂದು ಹೇಳಿದರು.
ಈ ಬಜೆಟ್ನ ಮೂರು ಪ್ರಮುಖ ವಿಷಯಗಳನ್ನು ಆಧರಿಸಿದೆ, ಅದೆಂದರೆ 1. ಮಹತ್ವಾಕಾಂಕ್ಷೆಯ ಭಾರತ 2. ಆರ್ಥಿಕ ಅಭಿವೃದ್ಧಿ 3. ಸಮಾಜದ ಬಗ್ಗೆ ಕಾಳಜಿ ಎಂದು ಹಣಕಾಸು ಸಚಿವೆ ಹೇಳಿದ್ದಾರೆ.
ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ‘ಮಹತ್ವಾಕಾಂಕ್ಷೆಯ ಭಾರತ’ ವ್ಯಾಪ್ತಿಗೆ ತರಲಾಗುವುದು ಎಂದು ಅವರು ಹೇಳಿದರು.
ರೈತರಿಗಾಗಿ ಮತ್ತೊಂದು ಘೋಷಣೆ ಮಾಡಿದ ಅವರು, “ಬಂಜರು ಭೂಮಿಯನ್ನು ಹೊಂದಿರುವವರಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು, ಅವರ ಆದಾಯ ಉತ್ಪಾದನೆಗೆ ಸಹಾಯ ಮಾಡಲು ಸಹಾಯ ಮಾಡಲಾಗುವುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.