ಮುಂಬಯಿ: ಶೀವಸೇನೆಯ ಮುಖವಾಣಿ ಸಾಮ್ನಾಗೆ ಸಂದರ್ಶನ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಭವಿಷ್ಯದಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಸುಳಿವನ್ನು ನೀಡಿದ್ದಾರೆ.
“ನಾವು ಎಂದಿಗೂ ಬಿಜೆಪಿಯೊಂದಿಗೆ ಒಂದಾಗುವುದಿಲ್ಲ ಎಂದು ಹೇಳಿಲ್ಲ” ಎಂದು ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
“ಒಂದು ವೇಳೆ ಬಿಜೆಪಿಯವರು ನನಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಿದ್ದರೆ ನಾನು ಮೈತ್ರಿಯನ್ನು ಕಡಿದುಕೊಳ್ಳುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಆಗಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಡುವೆ ನಾನು ಸ್ಯಾಂಡ್ವಿಚ್ ಆಗಿ ಹೋಗಿದ್ದೆ ” ಎಂದಿದ್ದಾರೆ.
“ನಿರ್ಧರಿಸಿದಂತೆಯೇ ಮುಖ್ಯಮಂತ್ರಿ ಸ್ಥಾನವನ್ನು ನೀಡುವಂತೆ ಬಿಜೆಪಿಯವರ ಬಳಿ ನಾವು ಕೇಳಿದ್ದೆವು, ಆದರೆ ಅವರು ನೀಡದೆ ವಂಚಿಸಿದರು. ಇದರಿಂದ ಮೈತ್ರಿ ಕಡಿದುಕೊಳ್ಳಬೇಕಾಯಿತು” ಎಂದಿದ್ದಾರೆ.
ಕಾಂಗ್ರೆಸ್, ಎನ್ ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಶಿವಸೇನೆ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚನೆ ಮಾಡಿದೆ, ಆದರೆ ಅಧಿಕಾರಕ್ಕೆ ಬಂದ ಬಳಿಕ ಶಿವಸೇನೆ ತನ್ನ ರಾಷ್ಟ್ರವಾದಿ ಚಿಂತನೆಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದೆ ಎಂಬ ಬಲವಾದ ಆರೋಪಗಳು ಕೇಳಿ ಬರುತ್ತಿವೆ.
ತಮ್ಮ ರಾಜ್ಯದಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ನೀಡಲು ಉದ್ಧವ್ ಠಾಕ್ರೆ ಅವರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.