ನವದೆಹಲಿ: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಯನ್ನು ರಾಷ್ಟ್ರಮಟ್ಟದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಕೇಂದ್ರವು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ. ಎನ್ಆರ್ಸಿಯನ್ನು ಪರಿಚಯಿಸಲು ಸರ್ಕಾರಕ್ಕೆ ಯಾವುದೇ ಯೋಜನೆ ಇದೆಯೇ ಎಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರವನ್ನು ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು ನೀಡಿದ್ದಾರೆ.
“ಇದುವರೆಗೂ ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ನಾಗರಿಕರ ನೋಂದಣಿ (ಎನ್ಆರ್ಐಸಿ) ತಯಾರಿಸಲು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ ಎನ್ಆರ್ಸಿ ಕುರಿತು ಸರ್ಕಾರ ಅಧಿಕೃತ ಕೇಳಿಕೆ ನೀಡಿರುವುದು ಇದೇ ಮೊದಲು.
ಫೆಬ್ರವರಿ 3 ರಂದು, ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆ (ಸಿಎಎ), ಎನ್ಆರ್ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಕುರಿತು ಚರ್ಚೆ ಮತ್ತು ಉತ್ತರಗಳನ್ನು ಕೋರಿ ಸರ್ಕಾರಕ್ಕೆ ನೋಟಿಸ್ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.