ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದ ಸಚಿವ ಸಂಪುಟಕ್ಕೆ ಇಂದು 10 ಮಂದಿ ನೂತನ ಸಚಿವರು ಸೇರ್ಪಡೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಇದಾಗಿದೆ.
ಉಪಚುನಾವಣೆಯಲ್ಲಿ ಗೆದ್ದು ಬಂದ 10 ಮಂದಿ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯ್ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಶಾಸಕ ಎಸ್. ಟಿ. ಸೋಮಶೇಖರ್ ಅವರು ಮೊದಲಿಗರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು, ನಂತರ, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಬಿ.ಸಿ ಪಾಟೀಲ್. ಕೆ.ಗೋಪಾಲಯ್ಯ. ನಾರಾಯಣಗೌಡ ಮತ್ತು ಶ್ರೀಮಂತ್ ಪಾಟೀಲ್ ಕ್ರಮವಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ ಸಚಿವರಾದರು.
ಬಿ.ಎಸ್ ಯಡಿಯೂರಪ್ಪ ಸರ್ಕಾರದ ಹಲವು ಸಂಪುಟ ಸಚಿವರು ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.