ಕೊಕ್ರಜಾರ್: ಐತಿಹಾಸಿಕ ಬೋಡೋ ಒಪ್ಪಂದಕ್ಕೆ ಸಹಿ ಹಾಕಿದ ಸುಮಾರು ಒಂದು ವಾರದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಅವರು ಒಪ್ಪಂದಕ್ಕೆ ಸಹಿ ಹಾಕಿದ ಬಗೆಗಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೊಕ್ರಜಾರ್ನಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ಕೊಕ್ರಾಜಾರ್ನಲ್ಲಿ ಮೋದಿಯನ್ನು ಆಗಮಿಸುವ ಪೋಸ್ಟರ್ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಪ್ರಧಾನ ಮಂತ್ರಿಯ ಭೇಟಿಯ ಮುನ್ನ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರು ಕೊಕ್ರಜಾರ್ನಲ್ಲಿನ ಸಿದ್ಧತೆಗಳು ಮತ್ತು ವ್ಯವಸ್ಥೆಗಳನ್ನು ಪರಿಶೀಲಿಸಿದರು.
“ಅಸ್ಸಾಂ ಮತ್ತು ಈಶಾನ್ಯದ ತ್ವರಿತ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಅತ್ಯಂತ ಸಕಾರಾತ್ಮಕ ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅವರು ಈಶಾನ್ಯವನ್ನು ಗೌರವಿಸುತ್ತಾರೆ ಮತ್ತು ಅವರು ಈಶಾನ್ಯದಲ್ಲಿ ತ್ವರಿತ ಬೆಳವಣಿಗೆಯನ್ನು ಬಯಸುತ್ತಿದ್ದಾರೆ. ಇದಕ್ಕಾಗಿಯೇ ರಾಜ್ಯದೊಳಗೆ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಕಾರ್ಯ ಮಾಡುತ್ತಿದ್ದಾರೆ. ಅಸ್ಸಾಂ ಮತ್ತು ಇಡೀ ಈಶಾನ್ಯದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನುಕರಣೀಯ ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ, ಈ ಬೋಡೋ ಶಾಂತಿ ಒಪ್ಪಂದವು ಅವುಗಳಲ್ಲಿ ಒಂದು” ಎಂದು ಸೋನಾವಾಲ್ ಹೇಳಿದ್ದಾರೆ.
“ಇದೇ ಕಾರಣದಿಂದಾಗಿ ನಮಗೆ ಬೋಡೋ ಒಪ್ಪಂದದ ಬಗ್ಗೆ ಹೆಮ್ಮೆ ಎನಿಸುತ್ತಿದೆ ಮತ್ತು ಫೆಬ್ರವರಿ 7 ರಂದು ಪ್ರಧಾನಿ ಮೋದಿಯವರನ್ನು ಸ್ವೀಕರಿಸಲು ನಾವು ಬಹಳ ಕುತೂಹಲದಿಂದ ಎದುರು ನೋಡುತ್ತಿದ್ದೇವೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪ್ರಧಾನಿ ಭೇಟಿಯ ಸಂದರ್ಭದಲ್ಲಿ ಭದ್ರತೆಯನ್ನು ಕಾಪಾಡಲು ರಾಜ್ಯ ಪೊಲೀಸರು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದು ಅಸ್ಸಾಂ ಡಿಜಿಪಿ ಭಾಸ್ಕರ್ ಜ್ಯೋತಿ ಹೇಳಿದ್ದಾರೆ.
ನಿಷೇಧಿತ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೊಡೋಲ್ಯಾಂಡ್ (ಎನ್ಡಿಎಫ್ಬಿ) ಮತ್ತು ಅದರ ಎಲ್ಲಾ ಬಣಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ದಿನಗಳಲ್ಲಿ ಮೋದಿ ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.