ನವದೆಹಲಿ: ಕೈಗಾರಿಕ ಸಂಬಂಧಿ ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳಲು ಯುವಕರಿಗೆ ಅನುವು ಮಾಡಿಕೊಡುವ ಸರ್ಕಾರದ ಮಹತ್ವಪೂರ್ಣ ಯೋಜನೆ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (ಪಿಎಂಕೆವಿವೈ) ಅಡಿಯಲ್ಲಿ ತರಬೇತಿ ಪಡೆದ 16.6 ಲಕ್ಷಕ್ಕೂ ಹೆಚ್ಚು ಯುವಕರು ಉದ್ಯೋಗಕ್ಕೆ ನಿಯೋಜನೆಗೊಂಡಿದ್ದಾರೆ ಎಂದು ಕೇಂದ್ರವು ಶುಕ್ರವಾರ ತಿಳಿಸಿದೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಆರ್. ಕೆ. ಸಿಂಗ್ ಅವರು ಈ ಬಗ್ಗೆ ರಾಜ್ಯ ಸಭೆಗೆ ಲಿಖಿತ ಮಾಹಿತಿ ನೀಡಿದ್ದಾರೆ.
“ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 371 ಕೋರ್ಸ್ಗಳಲ್ಲಿ ಅಪೇಕ್ಷಿತ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುವ ಉದ್ದೇಶದಿಂದ ಪ್ರಧಾನ್ ಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಎರಡನೇ ಹಂತವನ್ನು (ಪಿಎಂಕೆವಿವೈ 2.0) ಜಾರಿಗೆ ತರಲಾಗುತ್ತಿದೆ” ಎಂದು ಸಚಿವರು ಉತ್ತರಿಸಿದ್ದಾರೆ.
“2020ರ ಜನವರಿ 17 ರ ವರೆಗೆ 73.47 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದ್ದು, 16.61 ಲಕ್ಷ ಅಭ್ಯರ್ಥಿಗಳನ್ನು ಈ ಕಾರ್ಯಕ್ರಮದಡಿ ಉದ್ಯೋಗಕ್ಕೆ ನಿಯೋಜನೆಗೊಳಿಸಲಾಗಿದೆ. ಇದಲ್ಲದೆ, ಕುಶಲಕರ್ಮಿಗಳ ತರಬೇತಿ ಯೋಜನೆಯಡಿ, 137 ವಹಿವಾಟುಗಳಲ್ಲಿ ದೀರ್ಘಾವಧಿಯ ತರಬೇತಿಯನ್ನು 15697 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ) ಮೂಲಕ ನೀಡಲಾಗುತ್ತಿದ್ದು, ಇವುಗಳು 34.30 ಲಕ್ಷ ಅಭ್ಯರ್ಥಿಗಳ ಸಾಮರ್ಥ್ಯವನ್ನು ಹೊಂದಿವೆ”ಎಂದು ಸಿಂಗ್ ಹೇಳಿದ್ದಾರೆ.
ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (ಪಿಎಂಕೆವಿವೈ)ಯು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಜಾರಿಗೆ ತಂದಿರುವ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಮುಖ ಯೋಜನೆಯಾಗಿದೆ.
ಹೆಚ್ಚಿನ ಸಂಖ್ಯೆಯ ಭಾರತೀಯ ಯುವ ಜನರಿಗೆ ಉದ್ಯಮ-ಸಂಬಂಧಿತ ಕೌಶಲ್ಯ ತರಬೇತಿಯನ್ನು ಪಡೆಯಲು ಅನುವು ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ, ಅದು ಉತ್ತಮ ಜೀವನೋಪಾಯವನ್ನು ಪಡೆಯಲೂ ಸಹಾಯ ಮಾಡುತ್ತದೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಂಗ್, ತಂತ್ರಜ್ಞಾನ ಮತ್ತು ದೂರಸಂಪರ್ಕ ಕಂಪನಿಗಳಾದ ಐಬಿಎಂ, ಸಿಸ್ಕೊ, ಅಡೋಬ್, ಎಸ್ಎಪಿ, ಮೈಕ್ರೋಸಾಫ್ಟ್ ಸೇರಿದಂತೆ ಅನೇಕ ಕಂಪನಿಗಳು ಸ್ಕಿಲ್ ಇಂಡಿಯಾ ಮಿಷನ್ ಅಡಿಯಲ್ಲಿ ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಸಹಾಯ ಮಾಡಲು ಮುಂದೆ ಬಂದಿವೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.