ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಇಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿವೆ.
ದೆಹಲಿಯಲ್ಲಿ ಒಟ್ಟು 1.5 ಕೋಟಿ ಅರ್ಹ ಮತದಾರರಿದ್ದು, 70 ಕ್ಷೇತ್ರಗಳ ಅಭ್ಯರ್ಥಿಗಳು ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಒಟ್ಟು 672 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಫೆ.10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಬಿಜೆಪಿ, ಆಡಳಿತಾರೂಢ ಎಎಪಿ ಪಕ್ಷ ಮತ್ತು ಕಾಂಗ್ರೆಸ್ ಚುನಾವಣೆಯನ್ನು ಗೆಲ್ಲಲು ಹರ ಸಾಹಸವನ್ನು ಪಟ್ಟಿವೆ. ಆದರೆ ಕಾಂಗ್ರೆಸ್ ಪರಿಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಬಿಜೆಪಿ ಮತ್ತು ಎಎಪಿ ನಡುವೆ ನೇರ ಪೈಪೋಟಿ ನಡೆಯಲಿದೆ.
“ದೆಹಲಿ ವಿಧಾನಸಭಾ ಚುನಾವಣೆಯ ಮತದಾನದ ದಿನ ಇಂದು. ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವದ ಈ ಉತ್ಸವದಲ್ಲಿ ಜನರು ಭಾಗವಹಿಸಬೇಕು ಮತ್ತು ಹೊಸ ಮತದಾನದ ದಾಖಲೆಯನ್ನು ರಚಿಸಬೇಕು ಎಂಬುದು ಎಲ್ಲಾ ಮತದಾರರಿಗೆ ನನ್ನ ಮನವಿಯಾಗಿದೆ” ಎಂದು ಮೋದಿ ಇಂದು ಟ್ವಿಟ್ ಮಾಡಿದ್ದಾರೆ.
दिल्ली विधानसभा चुनाव के लिए आज मतदान का दिन है। सभी मतदाताओं से मेरी अपील है कि वे अधिक से अधिक संख्या में लोकतंत्र के इस महोत्सव में भाग लें और वोटिंग का नया रिकॉर्ड बनाएं।
Urging the people of Delhi, especially my young friends, to vote in record numbers.
— Narendra Modi (@narendramodi) February 8, 2020
ದೆಹಲಿಯ ಜನರು, ವಿಶೇಷವಾಗಿ ಯುವ ಸ್ನೇಹಿತರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.