ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನೂತನ ಸಚಿವರಿಗೆ ಮುಂದಿನ ವಾರ ಖಾತೆ ಹಂಚಿಕೆಯಾಗುವ ನಿರೀಕ್ಷೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಪ್ರಕ್ರಿಯೆ ಸ್ವಲ್ಪ ವಿಳಂಬವಾಗಲಿದೆ ಎಂದಿದ್ದಾರೆ.
ಅಲ್ಲದೇ, ವಿಧಾನಸಭಾ ಅಧಿವೇಶನ ಮಾರ್ಚ್ 2ಕ್ಕೆ ಆರಂಭಗೊಳ್ಳಲಿದ್ದು ಅದರೊಳಗೆ ಮತ್ತೊಂದು ಬಾರಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಫೆ. 21 ರ ಬಳಿಕ ಮುಖ್ಯಮಂತ್ರಿಗಳು ಮೂರನೇ ಬಾರಿಗೆ ತಮ್ಮ ಸಂಪುಟವನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ವೇಳೆ ಅವರು ನಿಷ್ಠಾವಂತ ಬಿಜೆಪಿ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ನಿರೀಕ್ಷೆ ಇದೆ. ಹೈಕಮಾಂಡ್ ಕೂಡ ಇದೇ ನಿರ್ದೇಶನವನ್ನು ಅವರಿಗೆ ನೀಡಿದೆ ಎನ್ನಲಾಗಿದೆ.
ಇದಕ್ಕೂ ಮುನ್ನ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಮಾತುಕತೆಯನ್ನು ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಕಾಂಗ್ರೆಸ್, ಜೆಡಿಎಸ್ನಿಂದ ವಲಸೆ ಬಂದಿರುವ ಶಾಸಕರಿಗೆ ಸಚಿವ ಸ್ಥಾನಗಳನ್ನು ನೀಡಲಾಗಿದೆ. ಇದು ಮೂಲ ಬಿಜೆಪಿಗರಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಮೂರನೇ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಮೂಲ ಬಿಜೆಪಿಗರಿಗೆ ಪ್ರಾಶಸ್ತ್ಯ ಸಿಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.