ನವದೆಹಲಿ: ಮಹಿಳೆಯರು ಮತ ಚಲಾಯಿಸುವುದಕ್ಕೂ ಮುನ್ನ ಪುರುಷರ ಸಲಹೆಯನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
“ಮಹಿಳೆಯರು ಯಾರಿಗೆ ಮತ ಚಲಾಯಿಸಬೇಕು ಎಂದು ನಿರ್ಧರಿಸುವಷ್ಟು ಸಮರ್ಥರಿಲ್ಲ ಎಂದು ನೀವು ಭಾವಿಸಿದ್ದೀರಾ?” ಎಂದು ಸ್ಮೃತಿ ಇರಾನಿ ಅವರು #AntiWomenKejriwal ಹ್ಯಾಶ್ಟ್ಯಾಗ್ ಬಳಸಿ ಟ್ವಿಟ್ ಮಾಡಿದ್ದಾರೆ.
आप क्या महिलाओं को इतना सक्षम नहीं समझते की वे स्वयं निर्धारित कर सके किसे वोट देना है ? #महिलाविरोधीकेजरीवाल https://t.co/fUnqt2gJZk
— Smriti Z Irani (@smritiirani) February 8, 2020
ದೆಹಲಿ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. 70 ಕ್ಷೇತ್ರಗಳಿಗೆ ಏಕ ಹಂತದಲ್ಲಿ ಮತದಾನವಿದ್ದು, ಫೆ.11ಕ್ಕೆ ಫಲಿತಾಂಶ ಹೊರ ಬರಲಿದೆ.
ಮತದಾನದ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಮಧ್ಯಾಹ್ನದವರೆಗೆ ಶೇ. 20 ರಷ್ಟು ಮತದಾನ ಮಾತ್ರ ದಾಖಲಾಗಿದೆ.
ಬಿಜೆಪಿ ಮತ್ತು ಎಎಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಾಂಗ್ರೆಸ್ ಯಾವುದೇ ಉತ್ಸಾಹವನ್ನು ತೋರಿಸುತ್ತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.