ನವದೆಹಲಿ: ದೆಹಲಿಯ ಆಡಳಿತರೂಢ ಎಎಪಿ ಪಕ್ಷದ ಶಾಸಕ ವೇದ್ ಪ್ರಕಾಶ್ ಅವರ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಶಾಸಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ.
ವೇದ್ ಪ್ರಕಾಶ್ ಬವನ ಕ್ಷೇತ್ರದ ಶಾಸಕರಾಗಿದ್ದು, ಈಶ್ವರ್ ಕಾಲೋನಿಯಲ್ಲಿ ಅವರ ಕಛೇರಿಯಿದೆ, ಕಛೇರಿಯ ಹೊರಭಾಗದಲ್ಲೇ ವೇದ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ಮಧ್ಯರಾತ್ರಿ ಒಂದು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದಾಳಿಕೋರರು ಯಾರು, ಗುಂಡಿನ ದಾಳಿ ನಡೆಸಲು ಕಾರಣವೇನು ಎಂಬಿತ್ಯಾದಿ ಅಂಶಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.