ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಸುಪ್ರೀಂಕೋರ್ಟ್ ಗುರುವಾರ ಎಲ್ಲಾ ರಾಜಕೀಯ ಪಕ್ಷಗಳಿಗೆ ತಮ್ಮ ಅಭ್ಯರ್ಥಿಗಳ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಆಯಾ ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡುವಂತೆ ಆದೇಶಿಸಿದೆ. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ.
ರಾಜಕೀಯ ಅಭ್ಯರ್ಥಿಗಳ ಅಪರಾಧ ಹಿನ್ನಲೆಯನ್ನು ಬಹಿರಂಗಪಡಿಸುವಂತೆ 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಪಾಲನೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಿ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಇಂದು ವಿಚಾರಣೆಗೊಳಪಡಿಸಿದೆ. ಈ ಅರ್ಜಿ ರಾಜಕೀಯದ ಅಪರಾಧೀಕರಣ ವಿಷಯವನ್ನು ಎತ್ತಿ ಹಿಡಿದಿದೆ.
ಕಳೆದ ನಾಲ್ಕು ಸಾರ್ವತ್ರಿಕ ಚುನಾವಣೆಗಳಲ್ಲಿ ರಾಜಕೀಯದ ಅಪರಾಧೀಕರಣದಲ್ಲಿ ಆತಂಕಕಾರಿಯಾದ ಹೆಚ್ಚಳ ಕಂಡುಬಂದಿದೆ ಎಂಬುದನ್ನು ಗಮನಿಸಿದ ಸರ್ವೋಚ್ಛ ನ್ಯಾಯಾಲಯ, ರಾಜಕೀಯ ಪಕ್ಷಗಳು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದರೆ, ಚುನಾವಣಾ ಆಯೋಗವು ಈ ಕಾರ್ಯವನ್ನು ಮಾಡಲು ಮುಂದಾಗಲಿದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆಯನ್ನು ನೀಡಿದೆ.
ರಾಜಕೀಯ ಪಕ್ಷಗಳು ತಮ್ಮ ವೆಬ್ಸೈಟ್ನಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳನ್ನು ನಿರ್ದಿಷ್ಟವಾಗಿ ತಿಳಿಸಬೇಕಾಗುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ. ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಪತ್ರಿಕೆಗಳಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.