ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುಮಾರು 13,000 ಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ರಾಜಕೀಯ ಬೆಳವಣಿಗೆ ಇದಾಗಿದೆ.
ಚುನಾವಣೆಯನ್ನು ಎಂಟು ಹಂತಗಳಲ್ಲಿ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಶಾಲಿಂದರ್ ಕುಮಾರ್ ಹೇಳಿದ್ದಾರೆ.
2018ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಎರಡು ಪ್ರಮುಖ ರಾಜಕೀಯ ಪಕ್ಷಗಳು ವಿಶೇಷ ಸ್ಥಾನಮಾನದ ವಿಷಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಚುನಾವಣೆಯನ್ನು ಕಾಶ್ಮೀರದಲ್ಲಿ ಬಹುತೇಕ ಬಹಿಷ್ಕರಿಸಲಾಯಿತು ಮತ್ತು 12,000 ಪಂಚಾಯತ್ ಸ್ಥಾನಗಳು ಇನ್ನೂ ಖಾಲಿ ಇವೆ.
ಮಾರ್ಚ್ನಲ್ಲಿ ಉಪಚುನಾವಣೆ ನಡೆಯಲಿರುವ ಹೆಚ್ಚಿನ ಸ್ಥಾನಗಳು ಕಾಶ್ಮೀರ ಕಣಿವೆಯಲ್ಲಿವೆ.
ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ, ಮತ್ತು ಮೆಹಬೂಬಾ ಮುಫ್ತಿ ಅವರು ಆರು ತಿಂಗಳಿನಿಂದ ಗೃಹ ಬಂಧನದಲ್ಲಿದ್ದಾರೆ. ಕಳೆದ ವಾರ, ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಆರೋಪವನ್ನು ಹೊರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.