ಅಹ್ಮದಾಬಾದ್: ಗುಜರಾತಿನ ಅಹ್ಮದಾಬಾದ್ನ ಮೊಟೆರಾ ಕ್ರೀಡಾಂಗಣವನ್ನು ಸರ್ದಾರ್ ವಲ್ಲಭಭಾಯಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇದು 1.10 ಲಕ್ಷ ಜನರ ಸಾಮರ್ಥ್ಯ ಹೊಂದಿರುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯ ಭಾಗವಾಗಿ ಇದನ್ನು 53000 ಆಸನಗಳಿಂದ 1.10 ಲಕ್ಷ ಆಸನಗಳಿಗೆ ಏರಿಸಲಾಗಿದೆ. ಮೊಟೆರಾ ಕ್ರೀಡಾಂಗಣವನ್ನು 2015 ರಲ್ಲಿ ನೆಲಸಮ ಮಾಡಿ ಮರು ನಿರ್ಮಾಣ ಮಾಡಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾರತ ಭೇಟಿಯ ಸಂದರ್ಭದಲ್ಲಿ ಈ ಕ್ರೀಡಾಂಗಣವನ್ನು ಉದ್ಘಾಟನೆಗೊಳಿಸಲಿದ್ದಾರೆ.
ಗುಜರಾತಿಗೆ ಆಗಮಿಸಲಿರುವ ಟ್ರಂಪ್ ಮೋದಿಯೊಂದಿಗೆ ಅಹ್ಮದಾಬಾದಿನಲ್ಲಿ ಬೃಹತ್ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ, ಸಬರಮತಿ ಆಶ್ರಮಕ್ಕೆ ಭೇಟಿಯನ್ನು ನೀಡಲಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹೊಸದಾಗಿ ನಿರ್ಮಿಸಲಾದ ಸರ್ದಾರ್ ವಲ್ಲಭಭಾಯಿ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಟ್ರಂಪ್ ಅವರು ಗುಜರಾತ್ ಭೇಟಿಯ ಸಮಯದಲ್ಲಿ, ಮೋದಿ ಅವರೊಂದಿಗೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಸಬರಮತಿ ಆಶ್ರಮಕ್ಕೆ 10 ಕಿ.ಮೀ. ಭವ್ಯ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಹಾತ್ಮ ಗಾಂಧಿ ತಂಗಿದ್ದ, ದೇಶದ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿದ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಅಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದರಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನಂತರ ಈ ಕ್ರೀಡಾಂಗಣದಲ್ಲಿ ಮೆಗಾ ಕಾರ್ಯಕ್ರಮ “ಕೇಮ್ ಚೋ ಟ್ರಂಪ್’ ನಡೆಯಲಿದೆ. ಕಳೆದ ವರ್ಷ ಯುಎಸ್ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಮೊಟೆರಾದಲ್ಲಿನ ಕ್ರೀಡಾಂಗಣವು 1.10 ಲಕ್ಷ ಆಸನ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ವಿಶ್ವದ ಅತೀದೊಡ್ಡ ಕ್ರೀಡಾಂಗಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.